ಕಪ್ಪು ಪಟ್ಟಿಯಿಂದ ಹೆಸರನ್ನು ಕೈಬಿಡಲು ಅರ್ಜಿದಾರರಿಂದ ₹1 ಲಕ್ಷ ಲಂಚ ಪಡೆಯುವಾಗ ರಾಜ್ಯ ಮಾಹಿತಿ ಆಯೋಗದ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಗುರುನಾಥ ಡಾಕಪ್ಪ ಅವರು ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪತ್ರಕರ್ತರಾದ ಸಾಯಿಬಣ್ಣ ನಾಸಿ ಅವರು ನೀಡಿದ ದೂರಿಗೆ ಮೇರೆಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಕಪ್ಪು ಪಟ್ಟಿಯಿಂದ ಪತ್ರಕರ್ತರೂ ಆದ ಸಾಯಿಬಣ್ಣ ಅವರ ಹೆಸರು ತೆಗೆಯಲು ಡಾಕಪ್ಪ ಅವರು ₹3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಗುರುವಾರ ₹1 ಲಕ್ಷ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡ ಬಳಿಕ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ, ಡಿವೈಎಸ್ಪಿ ಗೀತಾ ಬೇನಾಳ್, ಪೊಲೀಸ್ ಇನ್‌ಸ್ಪೆಕ್ಟರ್ ಅರುಣಕುಮೃ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.