ಎಲ್ಲಾ ಶಾಲಾ ಕಾಲೇಜುಗಳಲ್ಲಿ ಏಪ್ರಿಲ್ 14ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಜಯಂತ್ಯುತ್ಸವವನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ವಿವಿಧ ದಲಿತಪರ ಸಂಘಟನೆಗಳು ಆಗ್ರಹಿಸಿವೆ.
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಒಕ್ಕೂಟ, ಕರ್ನಾಟಕ ರಾಜ್ಯ ದಲಿತ ಮಹಿಳಾ ಒಕ್ಕೂಟ (ಕ್ರಾಂತಿಕಾರಿ) ತಾಲೂಕು ಶಾಖೆ ಸುರಪುರ ವತಿಯಿಂದ ಪಟ್ಟಣದ ಗಾಂಧಿವೃತ್ತದಲ್ಲಿ ಪ್ರತಿಭಟನೆ ಮಾಡಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರ ಸಲ್ಲಿಸಿ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ, “ಏ.14ರಂದು ಬಾಬಾ ಸಾಹೇಬರ ಜಯಂತಿಯನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಆಚರಿಸಲು ಕ್ರಮವಹಿಸಬೇಕು” ಎಂದರು. ಅಂದೇ ಎಲ್ಲಾ ಶಾಲಾ ಕಾಲೇಜು ಮಕ್ಕಳಿಗೆ ಬೇಸಿಗೆ ರಜೆ ಘೋಷಿಸುವಂತೆ ಆಗ್ರಹಿಸಿ ಗಾಂಧಿವೃತ್ತದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸುವುದರ ಮೂಲಕ ಮನವಿ ಮಾಡಿದರು.
ಇದನ್ನೂ ಓದಿ: ಸುರಪುರ | ಐತಿಹಾಸಿಕ ಸ್ಮಾರಕಗಳಲ್ಲಿ ಸ್ವಚ್ಛತೆ ಕಾಪಾಡಲು ಆಗ್ರಹಿಸಿ ನಗರಸಭೆ ಪೌರಾಯುಕ್ತರಿಗೆ ಮನವಿ
ಈ ವೇಳೆ ಮಾನಪ್ಪ ಕಟ್ಟಿಮನಿ, ಬಸವರಾಜ ದೊಡ್ಡಮನಿ ಶೆಳ್ಳಗಿ, ನಿಂಗಣ್ಣ ಗೋನಾಲ, ಅಪ್ಪಣ್ಣ ಗಾಯಕವಾಡ, ಮಾನಪ್ಪ ಶೆಳ್ಳಗಿ, ಶಿವಶಂಕರ ಹೆಚ್. ಹೊಸಮನಿ ಇನ್ನಿತರರು ಉಪಸ್ಥಿತರಿದ್ದರು.