ತುಮಕೂರು | ಓದಿನಿಂದಷ್ಟೇ ಉತ್ತಮ ಬರವಣಿಗೆ ಸಾಧ್ಯ : ಡಿ.ಉಮಾಪತಿ

Date:

Advertisements

ಪತ್ರಕರ್ತರಿಗೆ ಭಾಷೆ, ಜಾತಿ, ಲಿಂಗ ಸೂಕ್ಷ್ಮತೆಯ ಅರಿವು ಇರಬೇಕು ಎಂದು ಈದಿನ ಡಾಟ್ ಕಾಮ್ ಕನ್ಸಲ್ಟೆಂಟ್ ಎಡಿಟರ್ ಡಿ.ಉಮಾಪತಿ ಅಭಿಪ್ರಾಯಪಟ್ಟರು.

ತುಮಕೂರು ನಗರದ ಎಸ್ಎಸ್ಐಟಿ ಕ್ಯಾಂಪಸ್ ಆವರಣದಲ್ಲಿ ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್,ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ಈದಿನ ಡಾಟ್ ಕಾಮ್ ಹಾಗೂ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು (ಪತ್ರಿಕೋದ್ಯಮ ವಿಭಾಗ) ಇವರ ಸಹಯೋಗದಲ್ಲಿ ಇಂದಿನಿಂದ (ಗುರುವಾರ)ಆರಂಭವಾದ “ಡಿಜಿಟಲ್ ಮಾಧ್ಯಮ: ಸವಾಲು ಮತ್ತು ಸಾಧ್ಯತೆಗಳು” ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪತ್ರಿಕೋದ್ಯಮ ವಿದ್ಯಾರ್ಥಿಗಳು ಸಿನಿಮಾ ನೋಡುವ, ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಮೊಬೈಲ್ ಒಂದು ಮಾಯಾ ಕನ್ನಡಿ. ಅದರಲ್ಲಿ ಮುಖನೋಡಿಕೊಳ್ಳಲು ಹೋದರೆ ನೀವು ಮುಳುಗಿ ಹೋಗುತ್ತೀರಿ. ಮಾಯಾ ಕನ್ನಡಿಯ ಮೋಹದಿಂದ ಹೊರಬಂದು, ಪುಸ್ತಕ ಓದುವ ಅಭ್ಯಾಸ ರೂಢಿಸಿಕೊಳ್ಳಬೇಕು ಎಂದರು.

ಇಂಗ್ಲಿಷ್ ಭಾಷೆಗೆ ಹೆದರಬೇಡಿ, ಭಾಷೆ ಕಲಿಯಿರಿ, ಓದುವುದು ಕಲಿಯಿರಿ. ಓದಿನಿಂದಷ್ಟೇ ಉತ್ತಮ ಬರವಣಿಗೆ ಸಾಧ್ಯ. ಪತ್ರಕರ್ತರು ಎಐ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳದಿದ್ದರೆ ಅಪ್ರಸ್ತುವಾಗುತ್ತಾರೆ. ಹಾಗಾಗಿ ಎಐ ತಂತ್ರಜ್ಞಾನ ಬಳಸಿಕೊಂಡು ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು. ಎಐ ತಂತ್ರಜ್ಞಾನವನ್ನು ಪತ್ರಕರ್ತರು ಅಗತ್ಯವಾಗಿ ಬಳಸಲು ಕಲಿಯಬೇಕು ಎಂದರು.

Advertisements
1001224039

ಜಿಲ್ಲಾ ಪಂಚಾಯಿತಿ ಸಿಇಒ ಜಿ. ಪ್ರಭು ಮಾತನಾಡಿ ಸಂವಿಧಾನ ಮೂರು ಅಂಗಗಳನ್ನು ಸೃಜನೆ ಮಾಡಿದೆ. ಸಮಾಜ ಸೃಜನೆ ಮಾಡಿದ ನಾಲ್ಕನೇ ಅಂಗ ಪತ್ರಿಕಾ ರಂಗ. ಸಂವಿಧಾನದ ಆಶಯ ತಿಳಿದುಕೊಂಡರೆ ಮಾತ್ರ ಉತ್ತಮ ಪತ್ರಕರ್ತರಾಗಲು ಸಾಧ್ಯ. ಹಾಗಾಗಿ ಪತ್ರಕರ್ತರಿಗೆ ಸಂವಿಧಾನದ ಬಗ್ಗೆ ಆಳವಾದ ಜ್ಞಾನ ಬೇಕು. ಸಕಾರಾತ್ಮಕ ಅಂಶಗಳನ್ನು ವೃತ್ತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

1001225984

ಪ್ರತಿಯೊಂದು ಇಲಾಖೆಗೆ ಭೇಟಿ ನೀಡಿ ಜನರಿಗೆ ಅಗತ್ಯವಾಗಿ ಬೇಕಾದ ಮಾಹಿತಿ ನೀಡುವಲ್ಲಿ ಪತ್ರಕರ್ತರು ಮುಂದಾಗಬೇಕು. ಅಲ್ಲದೆ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ, ತಿಳಿವಳಿಕೆ ಮೂಡಿಸಬೇಕು ಎಂದು ಜಿ.ಪ್ರಭು ಹೇಳಿದರು.

ಸಾಹೇ ವಿವಿ ಕುಲಾಧಿಪತಿಗಳ ಸಲಹೆಗಾರ ಡಾ. ವಿವೇಕ್ ವೀರಯ್ಯ ಮಾತನಾಡಿ ಶಿಕ್ಷಣ ಭೀಷ್ಮ ಡಾ. ಎಚ್.ಎಂ ಗಂಗಾಧರಯ್ಯನವರು ಆರಭಿಂಸಿದ ಪ್ರಾಥಮಿಕ ಶಿಕ್ಷಣ ಶಾಲೆ, ಪ್ರಸ್ತುತ ಜಾಗತಿಕ ಗುಣಮಟ್ಟದ ಶಿಕ್ಷಣನ್ನು ನೀಡುತ್ತಿದೆ. ವೈದ್ಯಕೀಯ, ತಾಂತ್ರಿಕ ಸೇರಿದಂತೆ ವಿವಿಧ ವಲಯಗಳ ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟಿಕೊಂಡಿರುವ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯು ಮಾಧ್ಯಮ ಶಿಕ್ಷಣಕ್ಕೂ ಒತ್ತುಕೊಟ್ಟಿದೆ. ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಓದಿರುವ ವಿದ್ಯಾರ್ಥಿಗಳು ಉತ್ತಮ ಪತ್ರಕರ್ತರಾಗಿ ರೂಪುಗೊಂಡಿದ್ದಾರೆ ಎಂದರು.

1001225985

‘ಗ್ರಾಮೀಣ ವರದಿಗಾರಿಕೆ ಮತ್ತು ಡಿಜಿಟಲ್ ಮಾಧ್ಯಮ’ ವಿಷಯ ಕುರಿತು ಕುವೆಂಪು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಡಿ.ಎಸ್.ಪೂರ್ಣನಂದ ಅವರು ವಿಷಯ ಮಂಡಿಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ. ನಾಗಣ್ಣ, ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಬಿ.ಟಿ.ಮುದ್ದೇಶ್ , ಸಹಾಯಕ ಪ್ರಧ್ಯಾಪಕರಾದ ಡಾ.ಜ್ಯೋತಿ, ಎಂ.ಪಿ. ಶ್ವೇತಾ, ಎನ್.ಜಿ.ನವೀನ್, ಪತ್ರಕರ್ತರಾದ ಅನಿಲ್ ಕುಮಾರ್ ಚಿಕ್ಕದಾಳವಟ್ಟ, ಸಂತೋಷ್ ಎಚ್.ಎಂ ಇನ್ನಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X