ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ : ಪರಿಷತ್‌ಗೆ ಆಯ್ಕೆ ಬಳಿಕ ಜಗದೀಶ್ ಶೆಟ್ಟರ್

Date:

Advertisements
  • ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಿಸಲು ಪ್ರಯತ್ನ
  • ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ ಅಪರಾಧ

ಕಳೆದ ಚುನಾವಣೆಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಧಾನ ಪರಿಷತ್‌ಗೆ ಆಯ್ಕೆಯಾದ ಬಳಿಕ, ‘ಇದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ’ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಪರಿಷತ್‌ಗೆ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಕಾಂಗ್ರೆಸ್‌ ಪಕ್ಷಕ್ಕೆ ಧನ್ಯವಾದ ಸಲ್ಲಿಸಿದರು.

ಪರಿಷತ್‌ ಸದಸ್ಯನಾಗಿರುವುದು ನನ್ನ ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ ಪ್ರಾರಂಭವಾದಂತಾಗಿದೆ. ಇದು ಒಂದು ರೀತಿ ಎರಡನೇ ಇನ್ನಿಂಗ್ಸ್‌. ಈ ಇನ್ನಿಂಗ್ಸ್‌ನಲ್ಲಿ ಉತ್ತಮ ಫಲಿತಾಂಶ ಸಿಗುವ ನಂಬಿಕೆ ಇದೆ ಎಂದರು.

Advertisements

ಪರಿಷತ್‌ ಸಭಾಪತಿ ಆಗುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಗದೀಶ್ ಶೆಟ್ಟರ್, ಚುನಾವಣೆ ಸಂದರ್ಭದಲ್ಲಿ ಹೆಚ್ಚಿನ ಸ್ಥಾನಮಾನ ನೀಡುವ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿದೆ. ಇನ್ನೂ ಯಾವುದೇ ಪ್ರಸ್ತಾವ ಬಂದಿಲ್ಲ. ಯಾವ ಹುದ್ದೆ ನೀಡಬೇಕೆಂಬುದು ಪಕ್ಷದ ತೀರ್ಮಾನ ಎಂದು ಮಾಜಿ ಮುಖ್ಯಮಂತ್ರಿ ಶೆಟ್ಟರ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ಧರ್ಮಸ್ಥಳದ ‘ದೊಡ್ಡವರ’ ಒತ್ತಡಕ್ಕೆ ಮಣಿದು ಎಲ್ಲ ಸಾಕ್ಷ್ಯ ನಾಶಪಡಿಸಿದ್ದಾರೆ : ಮಹೇಶ್ ಶೆಟ್ಟಿ ತಿಮರೋಡಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಪ್ರವಾಸ ಮಾಡುತ್ತೇನೆ. ಉತ್ತರ ಕರ್ನಾಟಕ ಭಾಗದ 11 ಸ್ಥಾನಗಳಲ್ಲಿ 7 ಸ್ಥಾನಗಳಲ್ಲಿ ಗೆಲ್ಲಲು ಶ್ರಮಿಸುತ್ತೇನೆ. ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಳ್ಳಲಾಗಿದೆ. ಪಕ್ಷವು ನನ್ನ ಅನುಭವ ಬಳಸಿಕೊಳ್ಳಲಿದೆ ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಅಕ್ಕಿಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದ ಶೆಟ್ಟರ್, ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ಕೊಡದಿರುವುದು ಅಕ್ಷಮ್ಯ ಅಪರಾಧ. ಮೊದಲು ಎಫ್‌ಸಿಐ ಅಕ್ಕಿ ಕೊಡುತ್ತೇವೆ ಅಂದಿದ್ದರು. ಇದೀಗ ರಾಜಕೀಯ ಕಾರಣಕ್ಕೆ ಅಕ್ಕಿ ಕೊಡುತ್ತಿಲ್ಲ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಕ್ಕೆ ಸಹಕಾರ ಕೊಡಬೇಕು. ಅಕ್ಕಿ ಕೊಡಲ್ಲ ಅನ್ನೋದು ಒಳ್ಳೆಯ ನಡವಳಿಕೆ ಅಲ್ಲ. ಅಕ್ಕಿ ಕೊಟ್ಟರೆ ಕಾಂಗ್ರೆಸ್‌​ಗೆ ಲಾಭ ಆಗುತ್ತೆ ಎಂದು ಬೇರೆ ಬೇರೆ ನೆಪವೊಡ್ಡುತ್ತಿದ್ದಾರೆ. ಇದ ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X