ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಕಾಮುಕ ಪುಂಡನೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರು ಆರೋಪಿಗೆ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಂಗಳೂರು ಬಳಿ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಳದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಘಟನೆ ನಡೆದಿದೆ. ಆರೋಪಿಯನ್ನು ಥಳಿಸಿರುವ ಪ್ರಯಾಣಿಕರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ನಾವೂರ ಗ್ರಾಮ ಪಂಚಾಯತಿ ಸದಸ್ಯ ಮಹಮ್ಮದ್ ಯಾನೆ ಮೋನು ಎಂದು ಹೆಸರಿಸಲಾಗಿದೆ. ಆತ ರಿಕ್ಷಾ ಚಾಲಕನಾಗಿದ್ದಾನೆ ಎಂದು ಹೇಳಲಾಗಿದೆ.
ಈ ವರದಿ ಓದಿದ್ದೀರಾ?: ಆಘಾತಕಾರಿ ಘಟನೆ | ಮಹಿಳೆ ಮೇಲೆ 18 ಕಾಮುಕರಿಂದ 18 ತಿಂಗಳು ನಿರಂತರ ಸಾಮೂಹಿಕ ಅತ್ಯಾಚಾರ
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಯುವತಿಯ ಪಕ್ಕದ ಸೀಟಿನಲ್ಲಿ ಆರೋಪಿ ಕುಳಿತಿದ್ದ. ಆಗ, ಯುವತಿಗೆ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಮನಿಸಿ: ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.