ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗಾಗಿ ದ.ಕ ಜಿಲ್ಲೆಯಲ್ಲಿರುವ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳಿಗೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಏಪ್ರಿಲ್ 10ರವರೆಗೆ ʼಸೇವಾ ಸಿಂಧು ಪೋರ್ಟಲ್ʼನಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಅಸೈಗೋಳಿ ಉಳ್ಳಾಲ (ಇಂಗ್ಲೀಷ್ ಮೀಡಿಯಂ, ಪಠ್ಯಕ್ರಮ-ಸಿಬಿಎಸ್ಇ) ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆ ಅಸೈ ಮದಕ, ಕೊಣಾಜೆ(ಇಂಗ್ಲೀಷ್ ಮೀಡಿಯಂ, ಸ್ಟೇಟ್ ಸಿಲೆಬಸ್) ವಸತಿ ಶಾಲೆಗಳಲ್ಲಿ ಪ್ರವೇಶಾತಿ ಪಡೆಯಬಹುದು.
ಪ್ರತಿ ವಿದ್ಯಾರ್ಥಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ಉಚಿತ ಶಿಕ್ಷಣ, ಉಚಿತ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಗ್ರಿ ನೀಡಲಾಗುತ್ತದೆ. ಶಾಲೆಗಳಲ್ಲಿ ವೈದ್ಯಕೀಯ ಸೌಲಭ್ಯ, ಹಾಸಿಗೆ ಹೊದಿಕೆ, ಟ್ರಂಕ್, ಮಂಚ, ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಗ್ರಿ, ಗ್ರಂಥಾಲಯಗಳ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ https://sevasindhuservices.karnataka.gov.in ಅಥವಾ ಹತ್ತಿರದ ಅಲ್ಪಸಂಖ್ಯಾತರ ವಸತಿ ಶಾಲೆಗಳು ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು.
ಇದನ್ನೂ ಓದಿ: ಮಂಗಳೂರು | ಮಹಾನಗರ ಪಾಲಿಕೆಯ ಮಾಜಿ ಉಪ ಮೇಯರ್ ಮುಹಮ್ಮದ್ ಕುಂಜತ್ತಬೈಲ್ ನಿಧನ
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ: 8277799990 ಅಥವಾ ಪಾಂಡೇಶ್ವರ ಓಲ್ಡ್‍ಕೆಂಟ್ ರೋಡ್‍ನಲ್ಲಿರುವ ಇಲಾಖೆಯ ಕಚೇರಿಗೆ ಭೇಟಿ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.