ಪತ್ನಿಯ ಸಾವಿನ ಸುದ್ದಿ ಕೇಳಿ ಆಘಾತಗೊಂಡ ಪತಿಯೂ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಮರಮ್ಮ ಕಳೆದ ಒಂದು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸುದ್ದಿ ತಿಳಿದ ಪತಿ ಬಿ ರಾಜಶೇಖರ್ ಕೆಲವೇ ಗಂಟೆಗಳಲ್ಲಿ ಅಂದರೆ ಇಂದು ಮುಂಜಾನೆ ಮರಣ ಹೊಂದಿದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಇವರಿಗೆ ಪುತ್ರ, ಪುತ್ರಿ ಇದ್ದು, ಇಂದು ಸಂಜೆ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಜೀವನದಲ್ಲಿ ಬಾಳ ಸಂಗಾತಿಗಳಾಗಿ ಹೆಜ್ಜೆ ಹಾಕಿದ್ದ ಸತಿಪತಿ ಸಾವಿನಲ್ಲೂ ಒಂದಾಗಿರುವ ಅಪರೂಪದ ಪ್ರಸಂಗ ಇದಾಗಿದೆ.
ಇದನ್ನೂ ಓದಿ: ರಾಯಚೂರು | ಪಿಡಿಓ, ಅಧಿಕಾರ ದುರ್ಬಳಕೆ ಆರೋಪ: ಕೂಲಿ ಕಾರ್ಮಿಕರು ಧರಣಿ