ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸಂಪಗಾಂವ ಮತ್ತು ಪಟ್ಟಿಹಾಳ ಕೆ.ಎಸ್. ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಹೊಲಗಳಲ್ಲಿ ಚಿರತೆ ಅಡ್ಡಾಡಿದ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಹತ್ತಿರದ ಪ್ರದೇಶದಲ್ಲಿ ನರಿಯನ್ನು ಬೇಟೆಯಾಡಿ ತಿಂದಿರುವ ಅವಶೇಷಗಳು ಕೂಡಾ ಕಂಡುಬಂದಿವೆ.
ಸ್ಥಿತಿಗತಿ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಗ್ರಾಮಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ. ಚಿರತೆಯನ್ನು ಸೆರೆಹಿಡಿಯಲು ನಾಲ್ಕು ಬೋನುಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಆಡನ್ನು ಕಟ್ಟಿ, ಆಹಾರ ಒದಗಿಸಲಾಗಿದೆ.ಬೆಳಗಾವಿ
ಸ್ಥಳೀಯರು ರಾತ್ರಿ ಹೊತ್ತು ಹೊಲಗಳಿಗೆ ಹೋಗುವುದನ್ನು ತಪ್ಪಿಸಲು ಹಾಗೂ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಗ್ರಾಮಸ್ಥರು ಚಿರತೆ ಪತ್ತೆಯಾದಲ್ಲಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.