ನೆರೆಹೊರೆಯ ರಾಷ್ಟ್ರಗಳಾದ ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಭಾರಿ ಭೂಕಂಪ ಸಂಭವಿಸಿದೆ. ಕಟ್ಟಡಗಳು, ಸೇತುವೆ ಮತ್ತು ಅಣೆಕಟ್ಟುಗಳು ನಾಶಗೊಂಡಿವೆ. ಮ್ಯಾನ್ಮಾರ್‌ನಲ್ಲಿ ಕನಿಷ್ಠ 150 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಭೂಕಂಪನ ಘಟನೆಯಲ್ಲಿ ಸುಮಾರು 732 ಜನರು ಗಾಯಗೊಂಡಿದ್ದಾರೆ. ಹಲವು ನಗರಗಳಲ್ಲಿ ಭಾರೀ ಹಾನಿಯಾಗಿದ್ದು, ದುರ್ಘಟನೆಯಲ್ಲಿನ ಹಾನಿಯ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ದುರ್ಘಟನೆಯಲ್ಲಿ 150 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಪೈಟಾವ್‌ನಲ್ಲಿ 96 ಮಂದಿ, ಸಾಗೈಂಗ್‌ನಲ್ಲಿ 18 ಮಂದಿ ಮತ್ತು ಮಂಡಲೆಯಲ್ಲಿ 30 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಥಾಯ್ಲೆಂಡ್‌ನ ಬ್ಯಾಂಕಾಕ್ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡ ಕುಸಿದಿದ್ದು, ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ. ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಕಟ್ಟಡ ಕುಸಿದಿದ್ದು, ಅದರಡಿಯಲ್ಲಿ ಹಲವು ಕಾರ್ಮಿಕರು ಸಿಲುಕಿದ್ದಾರೆ ಎಂದು ಹೇಳಲಾಗಿದೆ.
ಹಾನಿಗೊಳಗಾದ ನಗರಗಳಲ್ಲಿ ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಪಡೆಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.