ದಾವಣಗೆರೆಯ ವಿವಿಧ ತಾಲೂಕುಗಳ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 31 ಕಾರ್ಯಕರ್ತೆ ಮತ್ತು 214 ಸಹಾಯಕಿಯ ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ.
ದಾವಣಗೆರೆ, ಹರಿಹರ, ಜಗಳೂರು, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನಲ್ಲಿ ಇಲಾಖೆ ಅಡಿಯಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿನ ಖಾಲಿ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳಿಗೆ ಅರ್ಹ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಇಲಾಖೆಯ https://dwcd.karnataka.gov.in ವೆಬ್‌ಸೈಟ್‌ನಲ್ಲಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಯ ಸಬ್‍ಟ್ಯಾಬ್ https://karnemakaone.kar.nic.in/abcd/ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ಭಾವಚಿತ್ರ, ಅಗತ್ಯ ದಾಖಲೆ, ಆಧಾರ್ ಸಂಖ್ಯೆ ನಮೂದಿಸಿ ಇ-ಸಹಿಯನ್ನು ಒದಗಿಸಬೇಕು ಎಂದು ಹೇಳಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದಾವಣಗೆರೆ 08192-263219, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಹರಿಹರ 08192-241431, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಜಗಳೂರು 08196-227132, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಹೊನ್ನಾಳಿ ಮತ್ತು ನ್ಯಾಮತಿ 08196-227132 ಸಂಪರ್ಕಿಸಬಹುದು.