ವಿಧಾನಸೌಧದಲ್ಲೇ ‘ಮೌಢ್ಯ’ಕ್ಕೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ

Date:

Advertisements
  • ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಂದ್ ಮಾಡಲಾಗಿದ್ದ ದಕ್ಷಿಣ ದ್ವಾರ
  • ‘ವಾಸ್ತು ಸರಿಯಿಲ್ಲ’ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ದ್ವಾರ

‘ವಾಸ್ತು ಸರಿಯಿಲ್ಲ’ ಎನ್ನುವ ಕಾರಣದಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ತೆರೆಸುವ ಮೂಲಕ, ‘ಮೌಢ್ಯ’ಕ್ಕೆ ಸೆಡ್ಡು ಹೊಡೆದಿದ್ದಾರೆ.

ಶನಿವಾರ ‘ಅನ್ನಭಾಗ್ಯ’ ಯೋಜನೆಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು.

‘ವಾಸ್ತು ಕಾರಣ’ದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂತು. ಆ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತು, ದ್ವಾರ ತೆರೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆ ಬಳಿಕ ಪಶ್ಚಿಮ ದ್ವಾರದಿಂದ ಸಿಬ್ಬಂದಿ ಒಳಗೆ ಹೋಗಿ ದಕ್ಷಿಣದ ದ್ವಾರವನ್ನು ತೆರೆದ ಬಳಿಕ, ಅದೇ ದ್ವಾರದ ಮೂಲಕವೇ ತಮ್ಮ ಕಚೇರಿ ಪ್ರವೇಶಿಸಿದರು.

Advertisements

ಆರೋಗ್ಯಕರ ಮನಸ್ಸು, ಸ್ವಚ್ಛ ಹೃದಯ, ಜನಪರ ಕಾಳಜಿ, ಒಳ್ಳೆಯ ಗಾಳಿ ಬೆಳಕು ಬರುವಂತಿದ್ದರೆ ಅದುವೇ ‘ಉತ್ತಮ ವಾಸ್ತು’ ಎಂದು ಮೌಢ್ಯಾಚರಣೆಯ ವಿರುದ್ಧ ತಮಗಿರುವ ನಿಲುವನ್ನು ಅಧಿಕಾರಿಗಳೊಂದಿಗೆ ಹಂಚಿಕೊಂಡರು.

ಸಭೆ ಮುಗಿದ ಬಳಿಕವೂ ದಕ್ಷಿಣದ ದ್ವಾರದ ಮೂಲಕವೇ ಮುಖ್ಯಮಂತ್ರಿಗಳು ಹೊರಗಡೆ ಬಂದರು.

ಬಿ ಎಸ್ ಯಡಿಯೂರಪಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ‘ವಾಸ್ತು ಸರಿಯಿಲ್ಲ’ ಎನ್ನುವ ಕಾರಣಕ್ಕೆ ದಕ್ಷಿಣದ ದ್ವಾರವನ್ನು ಬಂದ್ ಮಾಡಲಾಗಿತ್ತು.

ಮೌಢ್ಯ ನಿಷೇಧ ಕಾಯ್ದೆ
2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೂಪಿಸಲಾಗಿದ್ದ ಮಾಟ ಮಂತ್ರ ಮತ್ತು ವಾಮಾಚಾರ ನಿಯಂತ್ರಿಸುವ ಮೂಢನಂಬಿಕೆ ನಿಷೇಧ ಕಾಯ್ದೆಯನ್ನು ಯಾವುದೇ ಬದಲಾವಣೆಯಿಲ್ಲದೇ 2020ರ ಜನವರಿ 4ರಿಂದ ಜಾರಿಗೆ ಬರುವಂತೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿತ್ತು. 2017ರ ಡಿಸೆಂಬರ್‍‌ನಲ್ಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಕಾನೂನಾತ್ಮಕ ತೊಡಕುಗಳು ಇದ್ದದ್ದರಿಂದ ಅವುಗಳನ್ನು ತೆಗೆದು, ಅಂಕಿತ ಹಾಕಲು ರಾಜ್ಯ ಸರ್ಕಾರ ರಾಜ್ಯಪಾಲರಿಗೆ ಕಳುಹಿಸಿತ್ತು. ರಾಜ್ಯಪಾಲರೂ ಕೂಡ ಅಸ್ತು ಎಂದ ಬಳಿಕ, ರಾಜ್ಯದಲ್ಲಿ ಜಾರಿಗೆ ಬಂದಿದೆ.

ಎಂಜಲು ಎಲೆ ಮೇಲೆ ಉರುಳುವ ಅಮಾನವೀಯ ಮಡೆ ಸ್ನಾನ, ಮಾಟ ಮಂತ್ರ, ವಶೀಕರಣ ಮತ್ತಿತರ ಪದ್ದತಿ ಆಚರಿಸುವವರನ್ನು ಶಿಕ್ಷೆಗೆ ಗುರಿಪಡಿಸಲು ‘ಮೌಢ್ಯ ನಿಷೇಧ ಕಾಯ್ದೆ’ಯ ಅಡಿಯಲ್ಲಿ ಅವಕಾಶ ಇದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X