ಬೆಂಗಳೂರು–ಕಾಮಾಖ್ಯ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು, ಒಟ್ಟು ಎಂಟಕ್ಕೂ ಅಧಿಕ ಮಂದಿಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಒಡಿಶಾದ ಕಟಕ್ ಜಿಲ್ಲೆಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಭಾನುವಾರ ಎಸ್ಎಂವಿಟಿ ಬೆಂಗಳೂರು-ಕಾಮಾಖ್ಯ ಎಕ್ಸ್ಪ್ರೆಸ್ (ಎಸಿ) ರೈಲಿನ ಹನ್ನೊಂದು ಬೋಗಿಗಳು ಹಳಿತಪ್ಪಿದೆ. ಮಂಗುಲಿ ಬಳಿಯ ನಿರ್ಗುಂಡಿಯಲ್ಲಿ ಬೆಳಿಗ್ಗೆ 11.54ಕ್ಕೆ ಈ ಘಟನೆ ನಡೆದಿದೆ.
ಇದನ್ನು ಓದಿದ್ದೀರಾ? ರೈಲು ಅವಘಡ | ಹಳಿ ತಪ್ಪಿದ ಬೆಂಗಳೂರು–ಕಾಮಾಖ್ಯ ಎಕ್ಸ್ಪ್ರೆಸ್ನ 11 ಬೋಗಿಗಳು
ಮೃತರ ಮತ್ತು ಗಾಯಾಳುಗಳ ಸಂಖ್ಯೆಯನ್ನು ಜಿಲ್ಲಾಧಿಕಾರಿ ದತ್ತಾತ್ರಯ ಭಾವೊಸಾಹೇಬ್ ಖಚಿತ ಪಡಿಸಿದ್ದಾರೆ. “ರೈಲು ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಎಂಟು ಮಂದಿಗೆ ಗಾಯವಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಎನ್ಡಿಆರ್ಎಫ್ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯ ನಂತರ ರೈಲ್ವೆ ಸಹಾಯವಾಣಿ ಸಂಖ್ಯೆ ಸಕ್ರಿಯಗೊಳಿಸಲಾಗಿದ್ದು, 8455885999 ಅಥವಾ 8991124238 ಕರೆ ಮಾಡಿ ಸಹಾಯ ಪಡೆಯಬಹುದಾಗಿದೆ.
