ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಸೇರಿ ಹಿಡಿದಿದ್ದಾರೆ.
ಕೇರಳ ನಿವಾಸಿಗಳಾದ ಮುರಳಿ ಮತ್ತು ಇರ್ಷಾದ್ ಬಂಧಿತರು.
ಶನಿವಾರ ಸಂಜೆ ರೈಲಿನಲ್ಲಿ ಬಂದಿದ್ದ ಈ ಮೂವರು ದೇರಳಕಟ್ಟೆ ಸಮೀಪ ರಾತ್ರಿವರೆಗೂ ಕಾದು ಕುಳಿತು ಕೃತ್ಯ ಎಸಗಲು ಮುಂದಾಗಿದ್ದರು. ತಡರಾತ್ರಿ 3 ಗಂಟೆ ವೇಳೆಗೆ ಡ್ರಿಲ್ ಮಷಿನ್ ಮೂಲಕ ಬಾಗಿಲು ಮುರಿಯಲು ಯತ್ನಿಸಿದಾಗ ಸೈರನ್ ಮೊಳಗಿದೆ. ಸ್ಥಳೀಯರು ಕೂಡಲೇ ಎಚ್ಚುಕೊಂಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಮೀಪದಲ್ಲೇ ಗಸ್ತಿನಲ್ಲಿದ್ದ ಕೊಣಾಜೆ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪರಾರಿಯಾಗಲು ಯತ್ನಿಸಿದ್ದ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ತಾಪಮಾನ ಹೆಚ್ಚಳ; ಪಕ್ಷಿಗಳಿಗೆ ನೀರಡಿಕೆ ನೀಗಿಸುವ ಜಾಗೃತಿ ಜಾಥಾ
ಪೊಲೀಸರು ಹಾಗೂ ಸ್ಥಳೀಯರು ಸೇರಿ ಇಬ್ಬರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಆರೋಪಿ ತಪ್ಪಿಸಿಕೊಂಡಿದ್ದಾನೆ. ವಿಚಾರಣೆ ವೇಳೆ ಆರೋಪಿಗಳಿಬ್ಬರೂ ಕೇರಳದ ವಿಜಯ ಬ್ಯಾಂಕ್ನಲ್ಲಿ ದರೋಡೆ ನಡೆಸಿದವರೆಂದು ವರದಿಯಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.