ಟ್ರಂಪ್ ಬಾಂಬ್‌ ದಾಳಿ ಬೆದರಿಕೆಗೆ ಜಗ್ಗದ ಇರಾನ್; ಅಮೆರಿಕ ಸಂಬಂಧಿತ ಸ್ಥಳಗಳಲ್ಲಿ ದಾಳಿಗೆ ಯೋಜನೆ

Date:

Advertisements

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಬಾಂಬ್ ಬೆದರಿಕೆಗೆ ಮಣಿಯಲು ಇರಾನ್ ನಿರಾಕರಿಸಿದ್ದು, ಅಗತ್ಯವಿದ್ದರೆ ಅಮೆರಿಕ ಸಂಬಂಧಿತ ಸ್ಥಳಗಳಲ್ಲಿ ದಾಳಿ ಮಾಡಲು ತನ್ನ ಭೂಗತ ಕ್ಷಿಪಣಿ ಶಸ್ತ್ರಾಗಾರವನ್ನು ಸಿದ್ಧಪಡಿಸುತ್ತಿದೆ ಎಂದು ಸರ್ಕಾರಿ ನಿಯಂತ್ರಿತ ಮಾಧ್ಯಮ ಟೆಹ್ರಾನ್ ಟೈಮ್ಸ್ ವರದಿ ಮಾಡಿದೆ.

ಇತ್ತೀಚಿಗಷ್ಟೆ ಇರಾನ್ ತನ್ನ ಪರಮಾಣು ಕಾರ್ಯಕ್ರಮದ ಕುರಿತು ವಾಷಿಂಗ್ಟನ್‌ನೊಂದಿಗೆ ಒಪ್ಪಂದಕ್ಕೆ ಬರದಿದ್ದರೆ ಬಾಂಬ್ ದಾಳಿ ಮತ್ತು ಎರಡು ಪಟ್ಟು ಸುಂಕಗಳನ್ನು ವಿಧಿಸುವುದಾಗಿ ಟ್ರಂಪ್‌ ಬೆದರಿಕೆ ಹಾಕಿದ್ದರು. ಅವರು ಒಪ್ಪಂದ ಮಾಡಿಕೊಳ್ಳದಿದ್ದರೆ ಬಾಂಬ್ ದಾಳಿ ನಡೆಯುತ್ತದೆ. ಅವರು ಒಪ್ಪಂದ ಮಾಡಿಕೊಳ್ಳದಿದ್ದರೆ, ನಾಲ್ಕು ವರ್ಷಗಳ ಹಿಂದೆ ಮಾಡಿದಂತೆ ನಾನು ಅವರ ಮೇಲೆ ಎರಡು ಪಟ್ಟು ಸುಂಕಗಳನ್ನು ವಿಧಿಸುವ ಅವಕಾಶವಿದೆ ಎಂದು ತಿಳಿಸಿದ್ದರು.

2017-21ರ ಮೊದಲ ಅವಧಿಯಲ್ಲಿ ಟ್ರಂಪ್ ಅವರು ಇರಾನ್ ಮತ್ತು ವಿಶ್ವ ಶಕ್ತಿಗಳ ನಡುವಿನ 2015 ರ ಒಪ್ಪಂದದಿಂದ ಅಮೆರಿಕವನ್ನು ಹಿಂತೆಗೆದುಕೊಂಡಿದ್ದರು. ಅದು ನಿರ್ಬಂಧಗಳ ಪರಿಹಾರಕ್ಕೆ ಬದಲಾಗಿ ಟೆಹ್ರಾನ್‌ನ ವಿವಾದಿತ ಪರಮಾಣು ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಾದ ಮಿತಿಗಳನ್ನು ವಿಧಿಸಿತ್ತು.

Advertisements

ಈ ಸುದ್ದಿ ಓದಿದ್ದೀರಾ? ಕೆನಡಾ ಸಂಸದ ಕನ್ನಡಿಗ ಚಂದ್ರ ಆರ್ಯಗೆ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ

ಟ್ರಂಪ್ ಅವರ ಬೆದರಿಕೆಯ ನಂತರ, ಇರಾನ್ ತನ್ನ ಕ್ಷಿಪಣಿಗಳನ್ನು ದೇಶಾದ್ಯಂತವಿರುವ ತನ್ನ ಭೂಗತ ಸ್ಥಳಗಳಲ್ಲಿ ಉಡಾವಣೆಗೆ ಸಿದ್ಧವಾದ ಸ್ಥಿತಿಯಲ್ಲಿ ಇರಿಸಿದೆ ಎಂದು ಟೆಹ್ರಾನ್ ಟೈಮ್ಸ್ ವರದಿ ಮಾಡಿದ್ದು, ಇವು ವೈಮಾನಿಕ ದಾಳಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ.

ಟ್ರಂಪ್ ಇರಾನ್‌ ಮೇಲೆ ಮತ್ತಷ್ಟು ನಿರ್ಬಂಧಗಳನ್ನು ಹೇರಿದ್ದಾರೆ. ಅಂದಿನಿಂದ ಇಸ್ಲಾಮಿಕ್ ಗಣರಾಜ್ಯವು ತನ್ನ ಯುರೇನಿಯಂ ಪುಷ್ಟೀಕರಣ ಕಾರ್ಯಕ್ರಮವನ್ನು ಹೆಚ್ಚಿಸುವಲ್ಲಿ ನಿರತವಾಗಿದೆ. ಒಪ್ಪಂದ ಮಾಡಿಕೊಳ್ಳಿ, ಇಲ್ಲವೇ ಮಿಲಿಟರಿ ಪರಿಣಾಮಗಳನ್ನು ಎದುರಿಸಿ ಎಂಬ ಟ್ರಂಪ್ ಎಚ್ಚರಿಕೆಯನ್ನು ಟೆಹ್ರಾನ್ ಇಲ್ಲಿಯವರೆಗೆ ನಿರ್ಲಕ್ಷಿಸಿದೆ.

ಹೊಸ ಪರಮಾಣು ಒಪ್ಪಂದ ಮಾಡಿಕೊಳ್ಳುವಂತೆ ಟೆಹ್ರಾನ್‌ಗೆ ಒತ್ತಾಯಿಸಿ ಟ್ರಂಪ್ ಬರೆದ ಪತ್ರಕ್ಕೆ ಇರಾನ್, ಒಮಾನ್ ಮೂಲಕ ಪ್ರತಿಕ್ರಿಯೆ ಕಳುಹಿಸಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಕ್ಚಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಝಾದಲ್ಲಿ ನರಮೇಧ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮತ್ತು ಇಸ್ರೇಲ್ ರಾಯಭಾರಿ ನಡುವೆ ವಾಕ್ಸಮರ

ಗಾಝಾದಲ್ಲಿ 'ಅಲ್‌ಝಝೀರಾ' ಸಂಸ್ಥೆಯ ಪತ್ರಕರ್ತನನ್ನು ಇಸ್ರೇಲ್ ಹತ್ಯೆಗೈದಿದೆ. ಈ ಹತ್ಯೆಯನ್ನು ಕಾಂಗ್ರೆಸ್‌...

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

Download Eedina App Android / iOS

X