ಸಾಬರಮತಿ ಆಶ್ರಮ ಪುನರಾಭಿವೃದ್ಧಿ ವಿರುದ್ಧ ಮಹಾತ್ಮ ಗಾಂಧಿ ಮರಿ ಮೊಮ್ಮಗ ಸುಪ್ರೀಂ ಕೋರ್ಟ್‌ ಮೊರೆ

Date:

Advertisements

ಸಾಬರಮತಿ ಆಶ್ರಮದ ಪುನರಾಭಿವೃದ್ಧಿ ಯೋಜನೆ ಎತ್ತಿಹಿಡಿದಿದ್ದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್‌ ಗಾಂಧಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಒಟ್ಟು 1,200 ಕೋಟಿ ರೂ. ವೆಚ್ಚದ ಯೋಜನೆ ಆಶ್ರಮದ ಸರಳತೆಯನ್ನು ಅಳಿಸಿಹಾಕುತ್ತದೆ ಮತ್ತು ಅದನ್ನು ಗಾಂಧಿ ಮೌಲ್ಯಗಳಿಂದ ದೂರವಾದ ಸರ್ಕಾರಿ ನಿಯಂತ್ರಿತ ಸ್ಮಾರಕವಾಗಿ ಪರಿವರ್ತಿಸುತ್ತದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಯೋಜನೆ ಮಹಾತ್ಮ ಗಾಂಧಿ ಪರಂಪರೆಗೆ ಮಾಡಿದ ದ್ರೋಹವಾಗಿದೆ. ಮೂಲ ಆಶ್ರಮ ಇರುವ ಸ್ಥಳ ಬದಲಾಯಿಸುವುದು ಜೊತೆಗೆ ವಸ್ತುಸಂಗ್ರಹಾಲಯ, ಆಂಫಿಥಿಯೇಟರ್‌ ಹಾಗೂ ಆಹಾರ ಕೇಂದ್ರದೊಂದಿಗೆ ಆಧುನೀಕೃತ ಅಂಗಳವಾಗಿ ಮರುರೂಪಿಸಲು ಸರ್ಕಾರ ಯತ್ನಿಸುತ್ತಿದೆ. ಗಾಂಧಿವಾದಿ ಚಿಂತನೆಗೆ ಯೋಜನೆಯಲ್ಲಿ ಬೆಲೆ ನೀಡಲಾಗಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

Advertisements

ಪುನರಾಭಿವೃದ್ಧಿ ಪ್ರಶ್ನಿಸಿ ಈ ಹಿಂದೆ ತುಷಾರ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಸೆಪ್ಟೆಂಬರ್ 2022ರಲ್ಲಿ ತಿರಸ್ಕರಿಸಿತ್ತು. ಆದರೆ ಹೈಕೋರ್ಟ್‌ ತೀರ್ಪು ಆಶ್ರಮದ ಪರಂಪರೆಯನ್ನು ನಿರ್ಲಕ್ಷಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಿಸಿರುವ ಅರ್ಜಿಯಲ್ಲಿ ವಿವರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಂಬೇಡ್ಕರ್ ಜನ್ಮದಿನ ಏ.14ರಂದು ಕೇಂದ್ರ ಸರಕಾರಿ ಕಚೇರಿಗಳಿಗೆ ರಜಾ ದಿನವಾಗಿ ಘೋಷಣೆ

ಹೈಕೋರ್ಟ್‌ ತೀರ್ಪನ್ನು ರದ್ದುಗೊಳಿಸಿ, ಪ್ರಕರಣದ ವಿಚಾರಣೆ ಮುಗಿಯುವವರೆಗೆ ಎಲ್ಲ ನಿರ್ಮಾಣ ಅಥವಾ ಪುನರಾಭಿವೃದ್ಧಿ ಚಟುವಟಿಕೆಗಳಿಗೆ ತಡೆ ನೀಡಬೇಕು. ಶತಮಾನದಷ್ಟು ಹಳೆಯದಾದ ಆಶ್ರಮದ ಸ್ಥಳಾಕೃತಿಯನ್ನು ಯೋಜನೆ ಬದಲಿಸುತ್ತದೆ ಜೊತೆಗೆ ಅದರ ಆಶಯಗಳಿಗೆ ಮಾರಕ. ಯೋಜನೆಯಡಿ 40 ಕಟ್ಟಡಗಳನ್ನು ಸಂರಕ್ಷಿಸಲಾಗುತ್ತಿದ್ದು ಉಳಿದ 200 ನಿರ್ಮಿತಿಗಳನ್ನು ನಾಶ ಅಥವಾ ಮರುನಿರ್ಮಾಣ ಮಾಡಲಾಗುತ್ತಿದೆ ಅರ್ಜಿಯಲ್ಲಿ ತಿಳಿಸಲಾಗಿದೆ.

ಹರಿಜನ ಕುಟುಂಬಗಳನ್ನು ಸ್ಥಳಾಂತರಿಸಿ ಪ್ರಸ್ತುತ ಈ ಪ್ರದೇಶದ ಮೇಲ್ವಿಚಾರಣೆ ಮಾಡುತ್ತಿರುವ ಗಾಂಧಿವಾದಿ ಟ್ರಸ್ಟ್‌ಗಳನ್ನು ಮೂಲೆಗುಂಪಾಗಿಸುತ್ತದೆ. ಮುಖ್ಯಮಂತ್ರಿ ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದ ಸರ್ಕಾರಿ ಪ್ರಾಬಲ್ಯದ ಸಂಸ್ಥೆಗೆ ಹಸ್ತಾಂತರಿಸುವ ಉದ್ದೇಶದಿಂದ ಯೋಜನೆ ಹಮ್ಮಿಕೊಳ್ಳಲಾಗಿದ್ದು ಸರ್ಕಾರ ಸ್ಮಾರಕವನ್ನು ಸ್ವಾಧೀನಪಡಿಸಿಕೊಳ್ಳುವ ಕುತಂತ್ರ ರೂಪಿಸಿದೆ. ಸ್ವತಂತ್ರ ಗಾಂಧಿವಾದಿಗಳು, ಇತಿಹಾಸಕಾರರು ಮತ್ತು ಆಶ್ರಮದ ಪಾಲಕರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಬೇಕು. ಸರ್ಕಾರದ ನಿಯಂತ್ರಣ ಇರಬಾರದು ಸ್ವತಂತ್ರ ಗಾಂಧಿವಾದಿಗಳು, ಇತಿಹಾಸಕಾರರು ಮತ್ತು ಆಶ್ರಮದ ಪಾಲಕರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈಗೊಳ್ಳಬೇಕು ಹಾಗೂ ಸರ್ಕಾರದ ನಿಯಂತ್ರಣ ಇರಬಾರದು ಎಂದು ಅರ್ಜಿದಾರರು ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ದಲಿತರನ್ನು ಹರಿಜನ ಎಂದು ನಾಮಕರಣ ಮಾಡಿದವರು ಗಾಂಧೀಜಿ. ಇಂತಹ ಅನೇಕ ಚಟುವಟಿಕೆಗಳಿಂದ ದಲಿತರು ಭಾರಿ ಬೆಲೆ ತೆರುವಂತೆ ಮಾಡಿದ್ದರು ಗಾಂಧೀಜಿ. ಬ್ರಿಟಿಷ್ರ ವಿರುದ್ಧ ಅನೇಕ ಬಾರಿ ಉಪವಾಸ ಕುಳಿತರು, ಆದರೆ ಒಮ್ಮಯೂ ದಲಿತರಿಗೆ ಶಿಕ್ಷಣ ಬೇಕು, ಬಡತನ ತೊಲಗಬೇಕೆಂದು ಯಾವತ್ತೂ ಉಪವಾಸ ಕೂರಲಿಲ್ಲ. ಆದರೂ ಮಹಾತ್ಮಾ, ರಾಷ್ಟ್ರಪಿತಾ ಎಂದು ಕರೆಸಿಕೊಂಡರು 🤣🤣🤣🤣

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X