ಇಂದು ದೇಶಾದ್ಯಂತ ಪವಿತ್ರ ರಂಜಾನ್ ಹಬ್ಬವನ್ನು ಆಚರಣೆ ಹಿನ್ನೆಲೆ ಶಿವಮೊಗ್ಗದ ಮುಸ್ಲಿಂ ಬಾಂಧವರು ಇಂದು ಈದ್ಗಾ ಮೈದಾನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಪರಸ್ಪರ ಆಲಿಂಗನ ಮಾಡಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನ ಕೋರಿದರು. ಬೆಳಗ್ಗೆ 9 ಗಂಟೆಗೆ ಆರಂಭಿಸಿ ಸುಮಾರು 30 ನಿಮಿಷಗಳವರೆಗೆ ಪ್ರಾರ್ಥನೆ ಸಲ್ಲಿಸಿದರು.

ಈದ್ದಾ ಮೈದಾನ, ಹಾಗೂ ಇತರೆ ಪ್ರಾರ್ಥನಾ ಮಂದಿರಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬದ ಆಚರಣೆ ಮಾಡಲಾಯಿತು.

ಈ ವೇಳೆ ಸಂಚಾರದಲ್ಲಿ ಯಾವುದೇ ಅಡಚಣೆಯಾಗದಂತೆ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ಇದನ್ನೂ ಓದಿ: ಶಿವಮೊಗ್ಗ | ಪಿಎಸ್‌ಐ ತಿರುಮಲೇಶ್ ಕಾರ್ಯ ವೈಖರಿಗೆ ಜನರ ಮೆಚ್ಚುಗೆ