3,500 ಕೋಟಿ ರೂಪಾಯಿ ಹೂಡಿಕೆಯಿಂದ 8 ಜಿಲ್ಲೆಗಳ 24,954 ಮಂದಿಗೆ ಉದ್ಯೋಗ ಸೃಷ್ಟಿ: ಎಂ ಬಿ ಪಾಟೀಲ್‌

Date:

Advertisements

ಕರ್ನಾಟಕದಲ್ಲಿ ಉದ್ಯೋಗ ಸೃಷ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು 69 ಯೋಜನೆಗಳ ಒಟ್ಟು ₹3,500 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿದೆ. ಇದರಿಂದ ವಿವಿಧ ಜಿಲ್ಲೆಗಳಲ್ಲಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

“ನನ್ನ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಅನುಮೋದನಾ ಸಮಿತಿಯ 152ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ರಾಜ್ಯದಲ್ಲಿ 24,954 ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ” ಎಂದು ಮಾಹಿತಿ ನೀಡಿದ್ದಾರೆ.

“ತುಮಕೂರು, ವಿಜಯಪುರ, ರಾಮನಗರ, ಕೋಲಾರ, ಬೆಳಗಾವಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಹೊಸ ಕೈಗಾರಿಕೆಗಳು ಅಸ್ತಿತ್ವಕ್ಕೆ ಬರಲಿದ್ದು, ಇದು ಏಕಗವಾಕ್ಷಿ ಅನುಮೋದನಾ ಸಮಿತಿಯ ಮತ್ತೊಂದು ಸಾಧನೆ” ಎಂದು ಎಂಬಿ ಪಾಟೀಲ್‌ ಸಂತಸ ವ್ಯಸಕ್ತಪಡಿಸಿದ್ದಾರೆ.

Advertisements

ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಕೈಗಾರಿಕೆಗಳಲ್ಲಿ ಮಷಿನ್ ಟೂಲ್, ತಂಪು ಪಾನೀಯ, ಕಾರ್ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್, ಕಬ್ಬಿಣ ಮತ್ತು ಉಕ್ಕು, ಪರಿಶುದ್ಧ ಜಲಜನಕ ಅನಿಲ, ಹಾಲಿನ ಪುಡಿ ತಯಾರಿಕಾ ಘಟಕಗಳು ಇರಲಿವೆ.

“ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್(ಕೆಎಸ್‌ಡಿಎಲ್‌) ₹250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು, ಉದ್ಯೋಗ ಸೃಷ್ಟಿಸಲು ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

“ಸುಮಾರು ₹50 ಕೋಟಿ ರೂಪಾಯಿಗೂ ಹೆಚ್ಚು ಬಂಡವಾಳ ಹೂಡಿಕೆಯ 12 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ನೀಡಿರುವ ಅನುಮೋದನೆಗಳಿಂದ ₹2,311 ಕೋಟಿ ಬಂಡವಾಳ ಹೂಡಿಕೆಯಾಗಲಿದೆ. ಇದರಿಂದ ಸುಮಾರು 18,972 ಜನರಿಗೆ ಉದ್ಯೋಗಾವಕಾಶ ಸಿಗಲಿದೆ. 15 ಕೋಟಿ ರೂಪಾಯಿಯಿಂದ 50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 55 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹1,148 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 5,832 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ಎರಡು ಯೋಜನೆಗೆ ನೀಡಿರುವ ಅನುಮೋದನೆಯಿಂದ ₹40 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 150 ಜನರಿಗೆ ಉದ್ಯೋಗವಕಾಶ ಸಿಗಲಿದೆ” ಎಂದು ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉದ್ಯೋಗ ಮಾಹಿತಿ | ಸಿಐಎಸ್‌ಎಫ್‌ ಕಾನ್‌ಸ್ಟೆಬಲ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ; ಏ.3 ಕೊನೆಯ ದಿನ

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಡಾ. ಎನ್ ಮಹೇಶ್, ಐಟಿಬಿಟಿ ಇಲಾಖೆಯ ನಿರ್ದೇಶಕ ರಾಹುಲ್ ಎಸ್ ಸಂಕನೂರ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

Download Eedina App Android / iOS

X