‘ಜಲ ಜೀವನ್ ಮಿಷನ್’ ಯೋಜನೆಯು ಸ್ಥಳೀಯ ಜನರಿಗೆ ಕುಡಿಯುವ ನೀರಿನ ಮೂಲಗಳನ್ನು ಸುಧಾರಿಸಲು ಹಾಗೂ ಬಲಪಡಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯಾಗಿದ್ದು, ಕಲಬುರಗಿ ಜಿಲ್ಲೆಯ ಅನೇಕ ಹಳ್ಳಿಗಳ ಜೆಜೆಎಂ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ.
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಶಕಲಾಸಪಲ್ಲಿ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಪೂರ್ಣಗೊಳ್ಳದೆ ಸ್ಥಗಿತಗೊಂಡಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು, ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿದ್ದಾರೆ” ಎಂದು ಸ್ಥಳೀಯರು ಆರೋಪಿಸಿದರು.
“ವಿಳಂಬಗೊಂಡಿರುವ ಜೆಜೆಎಂ ಕಾಮಗಾರಿಯಿಂದಾಗಿ ಶಕಲಾಸಪಲ್ಲಿ ಗ್ರಾಮದ ಹಲವು ಓಣಿಗಳಲ್ಲಿರುವ ಸಿ. ಸಿ. ರಸ್ತೆಗಳನ್ನು ಅಗೆದಿದ್ದು, ರಸ್ತೆಯು ತಗ್ಗು ಗುಂಡಿಗಳಿಂದ ಕೂಡಿದೆ. ಪರಿಣಾಮ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ ಮತ್ತು ಸಾರ್ವಜನಿಕರು ರಾತ್ರಿ ವೇಳೆ ರಸ್ತೆಯಲ್ಲಿ ಓಡಾಡುವಾಗ ಬಿದ್ದು ಗಾಯಗೊಂಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಹಿರಿಯ ನಾಗರಿಕರೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಯುವಕ
“ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಇನ್ನು ಮುಂದಾದರು ಎಚ್ಚೆತ್ತುಕೊಂಡು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ಒಂದು ವೇಳೆ ಕಾಮಗಾರಿ ಪೂರ್ಣಗೊಳ್ಳಿಸದಿದ್ದರೆ ಮುಂಬರುವ ದಿನಗಳಲ್ಲಿ ತೀವ್ರ ಹೋರಾಟ ರೂಪಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.
ವರದಿ ವಾಲಿಂಟರ್: ಮಹಾಂತೇಶ್