ಬೀದರ್‌ | ಲೋಕಸಭೆ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇರುವುದು ಸಂವಿಧಾನ ಉಲ್ಲಂಘನೆ : ಸಂಸದ ಸಾಗರ್‌ ಖಂಡ್ರೆ

Date:

Advertisements

ಲೋಕಸಭೆಯಲ್ಲಿ 2019ರಿಂದಲೂ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇದ್ದು, ಇದು ಸಂವಿಧಾನದ 93ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಸಂಸದ ಸಾಗರ್ ಖಂಡ್ರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ʼಸಂಸತ್ತಿನ ಕೆಳಮನೆ ಸಾಂವಿಧಾನಿಕವಾಗಿ, ಪ್ರಜಾಪ್ರಭತ್ವದ ತತ್ವದಲ್ಲಿ ನಡೆಯಬೇಕು. ಆದರೆ ಕೇಂದ್ರ ಸರಕಾರ ಸರ್ವಾಧಿಕಾರಿ ಧೋರಣೆ ತಳೆದಿದೆ. ಸಂಸತ್ತು ಪ್ರಜಾಸತ್ತಾತ್ಮಕವಾಗಿ ನಡೆಯಬೇಕಾದರೆ, ಎಲ್ಲ ಜನಪ್ರತಿನಿಧಿಗಳಿಗೂ ಪಕ್ಷಭೇದವಿಲ್ಲದೆ ಸಮಾನ ಅವಕಾಶ ದೊರಕಬೇಕು. ಸದಸ್ಯರು ಸಾಂವಿಧಾನಿಕ ಕರ್ತವ್ಯ ನಿಭಾಯಿಸುವಂತಹ ವಾತಾವರಣ ಇರಬೇಕು, ಆದರೆ ಇತ್ತೀಚಿನ ಕೆಲವು ಪ್ರವೃತ್ತಿಗಳು ಈ ವ್ಯವಸ್ಥೆಯ ಪಾವಿತ್ರ‍್ಯತೆಗೆ ಧಕ್ಕೆಯಾಗುತ್ತಿವೆ, ಪ್ರಜಾಪ್ರಭುತ್ವದ ಮೂಲ ತತ್ವಗಳನ್ನೇ ಅಪಹಾಸ್ಯ ಮಾಡುತ್ತಿವೆʼ ಎಂದು ದೂರಿದ್ದಾರೆ.

ʼಸದನದಲ್ಲಿ ಪ್ರತಿಪಕ್ಷದ ಸದಸ್ಯರಿಗೆ ಮಾತನಾಡಲು ಸೂಕ್ತ ಅವಕಾಶ ಕಲ್ಪಿಸದೆ ಹಕ್ಕು ಮೊಟಕುಗೊಳಿಸಲಾಗುತ್ತಿದೆ. ಇದು ಸಂಸದೀಯ ಕಲಾಪದ ಚರ್ಚೆಯ ಸ್ವರೂಪವನ್ನು ದುರ್ಬಲಗೊಳಿಸುತ್ತಿದೆʼ ಎಂದು ಸೋಮವಾರ ಪತ್ರಿಕಾ ಪ್ರಕಟಣೆ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

Advertisements

ʼಪ್ರತಿಪಕ್ಷಗಳ ಸಂಸದರು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿದಾಗ, ಅವರ ಮಾತುಗಳು ಕೇಳದ ರೀತಿಯಲ್ಲಿ ಮೈಕ್ರೊಫೋನ್‌ಗಳನ್ನು ಬಂದ್ ಮಾಡಲಾಗುತ್ತದೆ. ಪ್ರತಿಪಕ್ಷ ಸದಸ್ಯರ ಧ್ವನಿಯನ್ನೇ ದಮನ ಮಾಡುವ ಅಪಾಯಕಾರಿ ಪ್ರವೃತ್ತಿ ಬೆಳೆಯುತ್ತಿದೆ. ಆದರೆ ಆಡಳಿತ ಪಕ್ಷದ ಸದಸ್ಯರಿಗೆ ಮುಕ್ತ ಅವಕಾಶ ನೀಡಲಾಗುತ್ತಿದೆ. ಈ ತಾರತಮ್ಯ ಪ್ರವೃತ್ತಿ ಪ್ರಜಾಪ್ರಭುತ್ವಕ್ಕೆ ಮಾರಕʼ ಎಂದು ತಿಳಿಸಿದ್ದಾರೆ. 

ʼಬಜೆಟ್ ಮೇಲಿನ ಚರ್ಚೆಯಲ್ಲಿ ಕೆಲವು ಪ್ರಮುಖ ಸಚಿವಾಲಯಗಳನ್ನು ಹೊರಗಿಡಲಾಗುತ್ತಿದೆ, ಇದರಿಂದ ಹಣಕಾಸು ಮೇಲ್ವಿಚಾರಣೆ ಮತ್ತು ಪಾರದರ್ಶಕತೆ ತೀವ್ರವಾಗಿ ಕುಗ್ಗುತ್ತಿದೆ. ತುರ್ತು ಮತ್ತು ಜನರಿಗೆ ಉಪಯುಕ್ತವಾದ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಇರುವ ನಿಯಮ 193ನ್ನು ಸಮರ್ಪಕವಾಗಿ ಬಳಸಲು ಅವಕಾಶ ನೀಡುತ್ತಿಲ್ಲ. ಸರ್ಕಾರ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆʼ ಎಂದು ಆರೋಪಿಸಿದ್ದಾರೆ. 

ʼಸಂಸದೀಯ ಸ್ಥಾಯಿ ಸಮಿತಿಗಳ ಸ್ವಾಯತ್ತತೆಯನ್ನು ಸಹ ಕಸಿದುಕೊಳ್ಳಲಾಗುತ್ತಿದೆ ಮತ್ತು ಕೆಲವು ಸಂದರ್ಭಗಳಲ್ಲಿ ಸ್ಪೀಕರ್ ಕಚೇರಿಯಿಂದಲೇ ವರದಿಗಳ ತಿದ್ದುಪಡಿಯ ಸೂಚನೆ ನೀಡಲಾಗುತ್ತಿದೆ. ಶೂನ್ಯ ವೇಳೆಯಲ್ಲಿ ತುರ್ತು ವಿಷಯಗಳನ್ನು ಪ್ರಸ್ತಾಪಿಸಲು ಸಂಸದರಿಗೆ ನೀಡಲಾಗುತ್ತಿದ್ದ ಅವಕಾಶವನ್ನು ನಿರ್ಬಂಧಿಸಲಾಗುತ್ತಿದೆ ಇದು ಸರಕಾರದ ದಮನಕಾರಿ ಪ್ರವೃತ್ತಿʼ ಎಂದು ಆಕ್ಷೇಪಿಸಿದ್ದಾರೆ.

ʼಖಾಸಗಿ ಸದಸ್ಯರ ಮಸೂದೆಗಳು ಮತ್ತು ನಿರ್ಣಯಗಳಿಗೆ ಗಣನೀಯ ಹಿನ್ನಡೆಯಾಗುತ್ತಿದ್ದು, ಚರ್ಚೆಗಾಗಿ ಬೇಕಾದಷ್ಟು ಸಮಯ ಲಭಿಸುತ್ತಿಲ್ಲ. ಸಂಸದ್ ಟಿವಿಯಲ್ಲಿ ಪ್ರತಿಪಕ್ಷ ನಾಯಕರು ಮತ್ತು ಸದಸ್ಯರು ಮಾತನಾಡುವಾಗ ಅವರತ್ತ ಕ್ಯಾಮರಾ ಕೇಂದ್ರೀಕರಿಸದೆ, ಸಭಾಧ್ಯಕ್ಷರು ಮತ್ತು ಸದನದ ಇತರ ದೃಶ್ಯಗಳನ್ನು ತೋರಿಸಲಾಗುತ್ತದೆ ಇದು ಸರ್ವತಾ ಸಮರ್ಥನೀಯವಲ್ಲʼ ಎಂದು ಹೇಳಿದ್ದಾರೆ. 

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸವಕಲ್ಯಾಣದಲ್ಲಿ ಭೌತಿಕ ಅನುಭವ ಮಂಟಪ ಇತ್ತು : ಬೆಲ್ದಾಳ ಶರಣರು

ʼಸಲಹಾ ಸಮಿತಿ ಸಭೆಗಳನ್ನು ನಿಯಮಿತವಾಗಿ ಕರೆಯದೆ, ನಿರ್ಲಕ್ಷಿಸಲಾಗುತ್ತಿದೆ. ಈ ಬೆಳವಣಿಗೆಳಿಂದ ನಮ್ಮ ಸಂಸದೀಯ ವ್ಯವಸ್ಥೆಯ ಮೂಲಭೂತ ತತ್ವಗಳಿಗೆ ಧಕ್ಕೆಯಾಗುತ್ತಿದ್ದು, ತಕ್ಷಣ ಸರಿಪಡಿಸುವ ಅಗತ್ಯವಿದೆ. ನ್ಯಾಯಸಮ್ಮತತೆ, ಪಾರದರ್ಶಕತೆ ಮತ್ತು ಸಂವಿಧಾನದ ನಿಯಮಗಳ ಅನುಸರಣೆಯನ್ನು ಮರುಸ್ಥಾಪಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕು. ಪ್ರತಿಯೊಬ್ಬ ಜನಪ್ರತಿನಿಧಿಗೂ ಸದನದಲ್ಲಿ ಧ್ವನಿ ಎತ್ತಲು ಅವಕಾಶ ನೀಡಬೇಕುʼ ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X