ಭಾಲ್ಕಿ ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಜಾಬನೂರ ಅವರು ನೇಮಕಗೊಂಡರು.
ಭಾಲ್ಕಿ ಪಟ್ಟಣದ ತಾಲೂಕು ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಅವರು ನೇಮಕಾತಿ ಪತ್ರ ವಿತರಿಸಿದರು.
ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಅವರು ಮಾತನಾಡಿ, ‘ಸರಕಾರಿ ನೌಕರರ ಸಮಸ್ಯೆಗಳಿಗೆ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಧ್ವನಿಯಾಗಬೇಕು. ನ್ಯಾಯಯುತ ಏನೇ ಬೇಡಿಕೆ, ಸಮಸ್ಯೆಗಳು ಕಂಡುಬಂದಲ್ಲಿ ನೌಕರರ ನೆರವಿಗೆ ತಕ್ಷಣ ಪದಾಧಿಕಾರಿಗಳು ಧಾವಿಸಬೇಕು’ ಎಂದು ಸಲಹೆ ನೀಡಿದರು.
ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಬನ್ನಾಳೆ ಮಾತನಾಡಿ, ‘ತಾಲೂಕಿನಲ್ಲಿ ಎಲ್ಲ ಸರಕಾರಿ ನೌಕರರನ್ನು ವಿಶ್ವಾಸಕ್ಕೆ ಪಡೆದು ಸಂಘವನ್ನು ಬಲಪಡಿಸುವ ಪ್ರಯತ್ನ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಲೋಕಸಭೆ ಉಪ ಸಭಾಧ್ಯಕ್ಷರ ಹುದ್ದೆ ಖಾಲಿ ಇರುವುದು ಸಂವಿಧಾನ ಉಲ್ಲಂಘನೆ : ಸಂಸದ ಸಾಗರ್ ಖಂಡ್ರೆ
ಈ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಸಹಾಯಕ ಕೃಷಿ ನಿರ್ದೇಶಕ ಪಿ.ಎಂ.ಮಲ್ಲಿಕಾರ್ಜುನ, ತಾಲೂಕು ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ರಾಜಪ್ಪ ಪಾಟೀಲ್ ಸೇರಿದಂತೆ ಹಲವರು ಇದ್ದರು.