ಘಜ್ನಿ, ಘೋರಿ ನಾಚುವಂತೆ ಜನರ ಮೇಲೆ ದರ ಏರಿಕೆ ದಂಡಯಾತ್ರೆ: ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

Date:

Advertisements

ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ. ಜನರ ರಕ್ತ ಹೀರುತ್ತಿದೆ. ರಾಜ್ಯ ಸರಕಾರ ದಿನಕ್ಕೊಂದು ಸುಳ್ಳು ಹೇಳುತ್ತಿದೆ. ತಿಂಗಳಿಗೊಂದು ದರ ಏರಿಕೆ ಮಾಡುತ್ತಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದರ ಏರಿಕೆಗೆ ಪಂಚ ಗ್ಯಾರಂಟಿಯನ್ನು ನೆಪ ಮಾಡಿಕೊಂಡಿದೆ. ಆದರೆ ಸರ್ಕಾರದ ದುರುದ್ದೇಶ: ಜನರ ಲೂಟಿ ಮಾಡುವುದಷ್ಟೇ. ಭಾರತದ ಮೇಲೆ ಆಕ್ರಮಣ ನಡೆಸಿ ನಿರಂತರ ಲೂಟಿ ಮಾಡಿದ ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಅವರಿಬ್ಬರೂ ನಾಚುವಂತೆ ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ” ಎಂದು ಟೀಕಿಸಿದ್ದಾರೆ.

Advertisements

“ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ. ಇದು ದರ ಬೀಜಾಸುರ ಕಾಂಗ್ರೆಸ್ ಸರಕಾರ” ಎಂದು ದೂರಿದ್ದಾರೆ.

“ಇಷ್ಟು ಸಾಲದೆಂಬಂತೆ ಜನರ ಮೇಲೆ ಏಪ್ರಿಲ್ 1ರಿಂದ ಕಸದ ಸೆಸ್ (Garbage Cess) ಹೇರುತ್ತಿದೆ ದರಬೀಜಾಸುರ ಸರಕಾರ!! ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹಾಕಿಕೊಂಡಿದೆ ಎಂದಿರುವ ಸಚಿವರು; ಸರಕಾರವನ್ನು ದರ ಬೀಜಾಸುರ ಸರಕಾರ ಎಂದು ಕರೆದಿದ್ದಾರೆ ಹಾಗೂ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಿ ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್” ಎಂದು ಕುಟುಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕಳೆದ ಹತ್ತು ವರ್ಷಗಳ ದುರಾಡಳಿತದಲ್ಲಿ ಡೀಸೆಲ್ ಪೆಟ್ರೋಲ್ ಬೆಲೆ ಮೂರು ಪಟ್ಟು ಆಹಾರ ಪದಾರ್ಥಗಳು ಗಗನಕ್ಕೇರಿದೆ ಗ್ಯಾಸ್ ಸಿಲಿಂಡರ್ ಬೆಲೆ ಮೂರು ಪಟ್ಟು ನಿರುದ್ಯೋಗ ದಾಖಲೆ,, ಇವ್ಯಾವೂ ಮಾಜಿ ಜ್ಯಾತ್ಯಾತೀತ ಕುಮಾರಣ್ಣಗೆ ಗಮನಕ್ಕೆ ಬಂದಿಲ್ಲ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X