ಬೆಲೆ ಏರಿಕೆ | ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳುವೆ: ಯಡಿಯೂರಪ್ಪ

Date:

Advertisements

ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಎಲ್ಲ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ. ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಪ್ರಾರಂಭ ಮಾಡುತ್ತಿದ್ದೇವೆ. ನೋವು ಅನುಭವಿಸುತ್ತಿರುವ ಎಲ್ಲರೂ ಪಕ್ಷಭೇದ ಮರೆತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು” ಎಂದು ವಿನಂತಿಸಿದರು.

“ಸಿಎಂ ಕುರ್ಚಿಗಾಗಿ ಕಾಂಗ್ರೆಸ್ಸಿನಲ್ಲಿ ಮುಸುಕಿನ ಗುದ್ದಾಟ ನಡೆದಿದೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಅವರಿಗೆ ಮುಖ್ಯವೇ ಹೊರತು ಜನರು ಪ್ರಮುಖರಲ್ಲ. ಬಿಜೆಪಿಯ ಹೋರಾಟ ಇನ್ನೂ ಅನೇಕ ದಿನ ನಡೆಯಲಿದೆ. ಮೈಸೂರಿನಲ್ಲಿ ನಡೆಯುವ ಹೋರಾಟದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೂ ಭಾಗವಹಿಸುತ್ತಾರೆ” ಎಂದು ವಿವರಿಸಿದರು.

Advertisements

“ಮಾಧ್ಯಮ ಸ್ನೇಹಿತರಿಗೂ ಬೆಲೆ ಏರಿಕೆ ಬಿಸಿ ತಟ್ಟಿದೆ ಎಂದು ಭಾವಿಸುತ್ತೇನೆ. ಇಂಥ ಸಂದರ್ಭದಲ್ಲಿ ಮಾಧ್ಯಮ ಸ್ನೇಹಿತರು ನಮ್ಮ ಹೋರಾಟದಲ್ಲಿ ಗಟ್ಟಿಯಾಗಿ ನಿಂತಾಗ ಈ ಸರಕಾರ ಒಂದು ಹೆಜ್ಜೆ ಹಿಂದಿಡಬಹುದು ಎಂಬ ನಂಬಿಕೆ ಇದೆ” ಎಂದರು.

“ಅಜೀರ್ಣ ಆಗುವಷ್ಟು ಬಹುಮತವನ್ನು ಜನರು ಕಾಂಗ್ರೆಸ್ ಸರಕಾರಕ್ಕೆ ಕೊಟ್ಟಾಗ ಒಂದು ರೀತಿ ತುಘಲಕ್ ದರ್ಬಾರ್ ನಡೆಸಿ, ಜನಹಿತವನ್ನು ಮರೆತು, ಸಾಮಾನ್ಯ ಜನರು ಬದುಕಲಾಗದಷ್ಟು, ಉಸಿರು ಕಟ್ಟುವ ಪರಿಸ್ಥಿತಿಯನ್ನು ತಂದದ್ದು ಸಿದ್ದರಾಮಯ್ಯ ಸರಕಾರದ ಸಾಧನೆ. ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯನ್ನು ಅನುಸರಿಸಿದ್ದಾರೆ. ಉಳಿದ ಹಿಂದೂಗಳೇನು ಅಪರಾಧ ಮಾಡಿದ್ದಾರೆ” ಎಂದು ಪ್ರಶ್ನಿಸಿದರು.

“ಪ್ರತಿ ತಿಂಗಳು ಒಂದಲ್ಲ ಒಂದು ರೀತಿ ಬೆಲೆ ಹೆಚ್ಚಿಸುತ್ತಿದ್ದಾರೆ. ಪೆಟ್ರೋಲ್, ಬಸ್ ಪ್ರಯಾಣದರ ಹೆಚ್ಚಿಸಿದ್ದಾರೆ. ಸಾಮಾನ್ಯ ಜನರು ಬಳಸುವ ಹಾಲಿನ ದರವನ್ನು ಇನ್ನೆಂದೂ ಇಲ್ಲದ ರೀತಿಯಲ್ಲಿ ಒಂದೇ ಬಾರಿಗೆ ಒಂದು ಲೀಟರ್‌ಗೆ 4 ರೂ. ಹೆಚ್ಚಿಸಿದ್ದಾರೆ. ಒಟ್ಟಾರೆಯಾಗಿ ಒಂದೇ ವರ್ಷದಲ್ಲಿ ಹಾಲಿಗೆ ಒಂದು ಲೀಟರಿಗೆ 9 ರೂ. ಹೆಚ್ಚಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ವಿದ್ಯುತ್ ದರವನ್ನು ಪ್ರತಿ ಯೂನಿಟ್‍ಗೆ 36 ಪೈಸೆ ಹೆಚ್ಚಿಸಿದ್ದಾರೆ. ಈ ಸರಕಾರ ಬಂದ ಬಳಿಕ ಎರಡನೇ ಬಾರಿ ವಿದ್ಯುತ್ ದರ ಹೆಚ್ಚಿಸುತ್ತಿದ್ದಾರೆ. ಇದರಿಂದ ಸಣ್ಣ, ಮಧ್ಯಮ ವರ್ಗದ ಜನರು ಜೀವನ ಮಾಡಲು ಸಾಧ್ಯವಿಲ್ಲದೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ. ಹಿಂದೆ ರೈತರು ಟ್ರಾನ್ಸ್‍ಫಾರ್ಮರ್ ಹಾಕಿಸಲು 30 ಸಾವಿರ ವೆಚ್ಚ ಆಗುತ್ತಿತ್ತು. ಈಗ 2.5 ಲಕ್ಷ ಏರಿಸಿದ್ದಾರೆ. ಸ್ಟ್ಯಾಂಪ್‌ ಡ್ಯೂಟಿ, ಎಸ್.ಆರ್.ವ್ಯಾಲ್ಯೂ, ಗೈಡೆನ್ಸ್ ವ್ಯಾಲ್ಯೂ- ಇವನ್ನು ಶೇ 100ರಿಂದ ಶೇ 1000ದಷ್ಟು ಏರಿಸಿದ್ದಾರೆ. ದಿನಬಳಕೆಯ ಪ್ರತಿ ವಸ್ತುವಿನ ಬೆಲೆಯನ್ನು ಏರಿಸುತ್ತಿರುವ ಕಾಂಗ್ರೆಸ್ ಸರಕಾರ, ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X