ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಗೆ ದೂರು ನೀಡಲು ಹೋದ ವ್ಯಕ್ತಿಯನ್ನು ಪೊಲೀಸರು ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಠಾಣೆಯಲ್ಲಿ ಸಾವನ್ನಪ್ಪಿದ ಆರೋಪ ಕೇಳಿ ಬಂದಿದೆ.
ರಾಯಚೂರು ನಗರದ ಐಬಿ ರಸ್ತೆಯ ಈಶ್ವರ ನಗರ ನಿವಾಸಿ ವಿರೇಶ್ (27) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.
ಕೌಟುಂಬಿಕ ಕಲಹ ಕಾರಣಕ್ಕೆ ಪತ್ನಿ ಹಾಗೂ ಪತ್ನಿ ಮನೆಯವರ ದೂರಿನ ಮೇರೆಗೆ ಯುವಕನನ್ನು ಪಶ್ಚಿಮ ಠಾಣೆಯ ಪೊಲೀಸರು ವಿಚಾರಣೆಗೆ ಕರೆದೊಯ್ದ ಪೊಲೀಸರು. ವಿಚಾರಣೆ ವೇಳೆ ಯುವಕನನ್ನು ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದೆ.
ಪೊಲೀಸರ ಥಳಿತದಿಂದಲೇ ಯುವಕ ಸಾವನ್ನಪ್ಪಿದ್ದು, ಇದು ಲಾಕಪ್ ಡೆತ್ ಎಂದು ಆರೋಪಿಸಿ ಮೃತ ಯುವಕನ ಕುಟುಂಬಸ್ಥರು ಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಪಿಎಸ್‌ಐ ಮಂಜುನಾಥ ಹಾಗೂ ಸಿಬ್ಬಂದಿ ಮೇಲೆ ಕ್ರಮ ಕೈಗೊಂಡು ಸಂತ್ರಸ್ತ ಯುವಕನ ಕುಟುಂಬಕ್ಕೆ ಪರಿಹಾರ ನೀಡಬೇಕು. ನಗರದ ಪಶ್ಚಿಮ ಠಾಣೆ ಪೊಲೀಸರ ವಿರುದ್ದ ಪ್ರಕರಣ ದಾಖಲಿಸುವಂತೆ ಧರಣಿ ನಡೆಸಿದರು.