ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಸಿದ್ದರಾಮಯ್ಯ ಪದಕ ಪ್ರದಾನ

Date:

Advertisements

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ, ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.

“ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲ ಪದಕ ಪುರಸ್ಕೃತರಿಗೂ ಅಭಿನಂದನೆಗಳು. ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು”ಎಂದರು.

Advertisements

“ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು. ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು”ಎಂದು ಹೇಳಿದರು.

“ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು. ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಗೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆ ಉತ್ತಮವಾಗಿರಬೇಕು” ಎಂದರು.

“ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಅಪಾರ ಮೆಚ್ಚುಗೆಯ ವಿಷಯ. ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ದ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ”ಎಂದು ತಿಳಿಸಿದರು.

“ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ದವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು” ಎಂದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X