ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ‘ಲೋಕ ಅದಾಲತ್’ ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿಕ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ಪ್ರಕರಣಗಳು, ಸಿವಿಲ್ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಒಟ್ಟು 31 ನ್ಯಾಯಾಲಯಗಳಲ್ಲಿ ಜು.12 ರಂದು ನಡೆಯುವ ರಾಷ್ಟ್ರೀಯ ಲೋಕ ಅದಾಲತ್ ಮೂಲಕ ಶೀಘ್ರವೇ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಸುವರ್ಣ ಅವಕಾಶವಾಗಿದೆ. ಸಾರ್ವಜನಿಕರು ಹಾಗೂ ಕಕ್ಷಿದಾರರು ಇದರ ಪ್ರಯೋಜನ ಪಡೆದುಕೊಂಡು ತಮ್ಮ ವಿವಾದಗಳನ್ನು ಅಂತ್ಯಗೊಳಿಸಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಬಳ್ಳಾರಿ | ಜೋಳ ಖರೀದಿ ಕೇಂದ್ರ ತೆರೆಯಲು ಕನ್ನಡ ನಾಡು ರೈತ ಸಂಘ ಮನವಿ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಅಥವಾ ದೂ.08392-278077 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.