ಬಳ್ಳಾರಿ | ಬಿರು ಬಿಸಿಲು; ಅಗತ್ಯ ಮುನ್ನೆಚ್ಚರಿಕೆಗೆ ಡಿಎಚ್‌ಒ ಸೂಚನೆ

Date:

Advertisements

ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನಲೆ ಗರ್ಭಿಣಿ ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ಡಿಎಚ್‌ಒ ಡಾ.ಯಲ್ಲಾ ರಮೇಶ್ ಬಾಬು ಸಲಹೆ ಮತ್ತು ಸೂಚನೆ ನೀಡಿದರು.

ಕುರುಗೋಡು ತಾಲೂಕಿನ ಕೋಳೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಮಾತನಾಡಿದ ಅವರು, ಮಧ್ಯಾಹ್ನ 12 ರಿಂದ 3 ಗಂಟೆ ಅವಧಿಯಲ್ಲಿ ಬಿಸಿಲಿನ ತೀವ್ರತೆಯು ಹೆಚ್ಚಾಗಿರುತ್ತದೆ. ಗರ್ಭಿಣಿಯರು ಸಾಧ್ಯವಾದಷ್ಟೂ ಮನೆಯಲ್ಲಿಯೇ ಇರುವ ಮೂಲಕ ಆರೋಗ್ಯದ ಕಾಳಜಿಗೆ ಕುಟುಂಬದ ಸದಸ್ಯರು ಸಹ ಮುತುವರ್ಜಿ ವಹಿಸಬೇಕು” ಎಂದು ತಿಳಿಸಿದರು.

“ಈಗಾಗಲೇ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಕುಟುಂಬದ ಸದಸ್ಯರ ನಿರ್ಜಲೀಕರಣ ತಡೆಗಾಗಿ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಓ.ಆರ್.ಎಸ್. ಕಾರ್ನರ್ ಮಾಡಲಾಗಿದ್ದು, ಆಸ್ಪತ್ರೆ ಭೇಟಿ ಸಂದರ್ಭದಲ್ಲಿ ಓ.ಆರ್.ಎಸ್ ದ್ರಾವಣ ಸೇವಿಸುವ ಮೂಲಕ ದೇಹದಲ್ಲಿ ನಿರ್ಜಲೀಕರಣದಿಂದಾಗುವ ಅಪಾಯಗಳನ್ನು ತಪ್ಪಿಸಬಹುದಾಗಿದೆ” ಎಂದು ತಿಳಿಸಿದರು.

Advertisements

“ಈಗಾಗಲೇ ಬಿಸಿಲಿನ ಶಾಖಾಘಾತದಿಂದ ಸಂಭವಿಸಬಹುದಾದ ತೊಂದರೆಯನ್ನು ತಪ್ಪಿಸಲು ಮತ್ತು ತಕ್ಷಣ ಚಿಕಿತ್ಸೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಲಾ 01 ಬೆಡ್ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ 02 ಬೆಡ್ ಕಾಯ್ದಿರಿಸಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ:ಬಳ್ಳಾರಿ | ಜು.12ರಂದು ರಾಷ್ಟ್ರೀಯ ‘ಲೋಕ ಅದಾಲತ್’

ತಾರನಾಥ ಆರ್ಯುವೇದ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ್, ಆಯುಷ್ ಪ್ರಾಧ್ಯಾಪಕ ಡಾ.ರಾಜಶೇಖರ್ ಗಾಣಿಗೇರ್, ಡಾ.ಫಣೀಂದ್ರ, ಡಾ.ಕಲ್ಯಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಕಚೇರಿ ಅಧೀಕ್ಷಕ ಬಸವರಾಜ್, ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿರೇಶ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶರಣಮ್ಮ, ಸಿದ್ದಮ್ಮ, ಫಾರ್ಮಸಿಸ್ಟ್ ಕ್ರಿಷ್ಣಮೂರ್ತಿ, ಆಶಾಕಾರ್ಯಕರ್ತೆ ರಾಧ ಸೇರಿದಂತೆ ತಾಯಂದಿರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X