ಉಡುಪಿ | ಕಾಮಗಾರಿ ವಿಳಂಬ; ಮೋದಿ ಮುಖವಾಡ ಧರಿಸಿ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಉದ್ಘಾಟನೆ

Date:

Advertisements

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಉಡುಪಿ ನಗರ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಮೆರವಣಿಗೆ ಹಾಗೂ ಏಪ್ರಿಲ್ ಫೂಲ್ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.

ಕಲ್ಸಂಕ ಜಂಕ್ಷನ್‌ನಲ್ಲಿ ಸಮಿತಿಯ ಪ್ರಧಾನ ಸಂಚಾಲಕ ಅಮೃತ್ ಶೆಣೈ ಹಾಗೂ ಸಾಮಾಜಿಕ ಕಾರ್ಯಕರ್ತ ಅನ್ಸಾರ್ ಅಹ್ಮದ್ ಕೇಶ ಮುಂಡನ ಮಾಡಿಸಿದರು. ಬಳಿಕ ಎಲ್ಲ ಪ್ರತಿಭಟನಕಾರರ ಕಿವಿ ಮೇಲೆ ಹೂವನ್ನು ಇಡಲಾಯಿತು. ಭಿಕ್ಷುಕನ ವೇಷ ಧರಿಸಿದ್ದ ಅನ್ಸಾರ್ ಅಹ್ಮದ್ ಕೈಯಲ್ಲಿದ್ದ ತಟ್ಟೆಗೆ ಹಣ ಹಾಕುವ ಮೂಲಕ ಮೆರವಣಿಗೆಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಚಾಲನೆ ನೀಡಿದರು.

ಕಲ್ಸಂಕದಿಂದ ಹೊರಟ ಮೆರವಣಿಗೆ ಕಡಿಯಾಳಿ, ಕುಂಜಿಬೆಟ್ಟು ಮಾರ್ಗವಾಗಿ ಇಂದ್ರಾಳಿ ಸೇತುವೆವರೆಗೆ ಸಾಗಿತು. ಮೆರವಣಿಗೆಯುದ್ದಕ್ಕೂ ಸೇತುವೆ ನಿರ್ಮಾಣಕ್ಕಾಗಿ ಭಿಕ್ಷಾಟನೆಯ ಮೂಲಕ ಹಣವನ್ನು ಸಂಗ್ರಹಿಸಲಾಯಿತು. ಇಂದ್ರಾಳಿಯಲ್ಲಿ ಪ್ರತಿಭಟನಾ ಸಭೆ ನಡೆಸಿ, ಕೇಂದ್ರ ಸರ್ಕಾರದ ವೈಫಲ್ಯವನ್ನು ವಿರೋಧಿಸಲಾಯಿತು. ನಂತರ ಸೇತುವೆ ಉದ್ಘಾಟನೆಗೆ ಮುಖವಾಡ ಧರಿಸಿದ ಪ್ರಧಾನಿ ನರೇಂದ್ರ ಮೋದಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದ್ರಾಳಿಗೆ ಆಗಮಿಸಿದರು.

Advertisements

ಈ ವೇಳೆ ಮೆರವಣಿಗೆಯಲ್ಲಿ ಅನ್ಸಾರ್ ಅಹ್ಮದ್ ಸಂಗ್ರಹಿಸಿದ ಹಣವನ್ನು ಮೋದಿಯವರಿಗೆ ನೀಡುವ ಮೂಲಕ ಕೇಂದ್ರ ಸರ್ಕಾರದ ವಿಳಂಬ ನೀತಿಯನ್ನು ಅಣಕಿಸಲಾಯಿತು. ನಂತರ‌ ಸೇತುವೆಯನ್ನು ಉದ್ಘಾಟಿಸುವ ಮೂಲಕ ಮುಖವಾಡದ ಮೋದಿ ಏಪ್ರಿಲ್ ಫೂಲ್ ಮಾಡಿದರು. ಕಳೆದ ಏಳೆಂಟು ವರ್ಷಗಳಿಂದ ಉಡುಪಿ ಜನತೆಯನ್ನು ಸಂಸದರು ಮೂರ್ಖರನ್ನಾಗಿ ಮಾಡಿರುವ ಬಗ್ಗೆ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಪ್ರತಿಭಟನಕಾರರು ಕೆಲವೊತ್ತು ಇಂದ್ರಾಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಕೇಂದ್ರ ಸರ್ಕಾರ ಹಾಗೂ ಸಂಸದರ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಭ್ರಷ್ಟಾಚಾರಿಗಳೇ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸುತ್ತಿರುವುದು ಹಾಸ್ಯಾಸ್ಪದ – ನಾಗೇಂದ್ರ ಪುತ್ರನ್ ಕೋಟ

ಸಭೆಯಲ್ಲಿ ಮಾಜಿ ಸಚಿವ‌ರಾದ ಜಯಪ್ರಕಾಶ್ ಹೆಗ್ಡೆ, ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಸಿಪಿಎಂ ಮುಖಂಡ ಬಾಲಕೃಷ್ಣ ಶೆಟ್ಟಿ, ವೆಲ್‌ಫೇರ್ ಪಾರ್ಟಿಯ ಉಡುಪಿ ಜಿಲ್ಲಾಧ್ಯಕ್ಷ ಇದ್ರಿಸ್ ಹೂಡೆ, ಸಮಿತಿಯ ಅಧ್ಯಕ್ಷ ಕೀರ್ತಿ ಶೆಟ್ಟಿ, ಪ್ರಧಾನ ಸಂಚಾಲಕ ಅಮೃತ್ ಶೆಣೈ, ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ರಮೇಶ್ ಕಾಂಚನ್, ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಹರಿಪ್ರಸಾದ್ ರೈ, ಮುಹಮ್ಮದ್ ಮೌಲಾ, ಸುರೇಶ್ ಕಲ್ಲಾಗರ್, ಎಂ ಎ ಗಫೂರ್, ಮಂಜುಳಾ ನಾಯಕ್, ಪ್ರೊ.ಸುರೇಂದ್ರನಾಥ್ ಕೊಕ್ಕರ್ಣೆ, ಉದ್ಯಾವರ ನಾಗೇಶ್ ಕುಮಾರ್, ದಿನೇಶ್ ಮೊಳಹಳ್ಳಿ, ಇಸ್ಮಾಯಿಲ್ ಆತ್ರಾಡಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X