ಚಿತ್ರದುರ್ಗದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಹಾಗೂ ಯೋಜನಾ ಅಭಿಯಂತರ ಸತೀಶ್ ಕಲ್ಲಟ್ಟಿ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಡಿಎಂಎಫ್ ಯೋಜನೆ ಅಡಿಯಲ್ಲಿ ನಿರ್ಮಿಸುತ್ತಿರುವ 12 ಲಕ್ಷ ರೂ. ಮೊತ್ತದ ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ ಪೂರ್ಣಗೊಳಿಸದೆ ಕಾಮಗಾರಿ ಹಣವನ್ನು ದುರ್ಬಳಕೆ ಮಾಡಿಕೊಂಡ ಹಿನ್ನೆಲೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ನಿರ್ಮಿತಿ ಕೇಂದ್ರದ ಸಹಾಯಕ ಯೋಜನಾ ವ್ಯವಸ್ಥಾಪಕ ಎಂ ಜೆ ಮಲ್ಲಿಕಾರ್ಜುನ್ ಅವರು ಮೂಡಲಗಿರಿಯಪ್ಪ ಅವರು ನಿರ್ಮಿತಿ ಕೇದ್ರದಲ್ಲಿ ನಡೆಸಿದ ಅವ್ಯವಹಾರ ನಡೆಸಿದ್ದು, ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕ್ರಮಕ್ಕಾಗಿ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಸಂಬಂಧ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಮತ್ತು ಉಪ ವಿಭಾಗಾಧಿಕಾರಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಂಟಿಯಾಗಿ ಸ್ಥಳ ಪರಿಶೀಲಿಸಿ ವರದಿ ನೀಡುವಂತೆ ತಿಳಿಸಿದ್ದರು.
ಸ್ಥಳ ಪರಿಶೀಲನೆ ನಡೆಸಿ ವರದಿ ಕೊಟ್ಟ ಬಳಿಕ ಅಕ್ರಮ ನಡೆಸಿರುವುದು ಸಾಬೀತಾಗಿದೆ. ಈ ಕಾರಣದಿಂದ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಕ್ರಿಮಿನಲ್ ಪ್ರಕರಣದಡಿ ಎಫ್‌ಐಆರ್ ದಾಖಲಾಗಿತ್ತು. ಇದರ ಅನ್ವಯ ಜಿಲ್ಲಾಧಿಕಾರಿ ಮತ್ತು ನಿರ್ಮಿತಿ ಕೇಂದ್ರದ ಅಧ್ಯಕ್ಷರು, ಇವರಿಬ್ಬರು ತನಿಖೆಗೆ ಅಡ್ಡಿ ಪಡಿಸುವ, ಸಂಭವ ಇರುವ ಕಾರಣದಿಂದ ವಜಾ ಮಾಡಿ ಅದೇಶಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಚಿರತೆ ಸೆರೆಗೆ ಬೋನಿನಲ್ಲಿಟ್ಟಿದ್ದ ಮೇಕೆಯನ್ನೆ ಕದ್ದ ಕಳ್ಳರು
ಮೂಡಲಗಿರಿಯಪ್ಪ ಕೆ ಜಿ ಮತ್ತು ಸತೀಶ್ ಕಲ್ಲಟ್ಟಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿರುವ ಹಿನ್ನೆಲೆ ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಅವರನ್ನು ಕೂಡಲೇ ಸೇವೆಯಿಂದ ವಿಮುಕ್ತಿಗೊಳಿಸಿ ಆದೇಶಿಸಲಾಗಿದೆ.
ಚಿತ್ರದುರ್ಗ ನಿರ್ಮಿತಿ ಕೇಂದ್ರದ ಕೆಲ ಅಧಿಕಾರಿಗಳ ವಿರುದ್ದ ಹಲವು ದೂರುಗಳಿದ್ದು, ಪ್ರಕರಣಗಳು ತನಿಖೆಯ ಹಂತದಲ್ಲಿವೆ ಎನ್ನಲಾಗಿದೆ.