ಮತದಾರರ ಜಾಗೃತಿಗಾಗಿ “ನಮ್ಮ ಬೆಂಗಳೂರು ಐಕಾನ್ಸ್”ಗಳ ನೇಮಕ

Date:

Advertisements
  • ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿರುವ ನಮ್ಮ ಬೆಂಗಳೂರು ಐಕಾನ್ಸ್‌
  • 10 ದಿನಗಳ ಮುಂಚಿತವಾಗಿಯೇ ಮತದಾನದ ಚೀಟಿ ಹಾಗೂ ಮತಗಟ್ಟೆಯ ಮಾಹಿತಿ

ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ, ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಾಸ್ಟರ್ ಆನಂದ್ ಸೇರಿದಂತೆ ಐವರು ಪ್ರಮುಖ ವ್ಯಕ್ತಿಗಳನ್ನು ‘ನಮ್ಮ ಬೆಂಗಳೂರು ಐಕಾನ್ಸ್’ಗಳಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಮಂಗಳವಾರ ನಗರದ ಟೌನ್ ಹಾಲ್‌ನಲ್ಲಿ “ನಮ್ಮ ಬೆಂಗಳೂರು ಐಕಾನ್ಸ್” ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, “ಮತದಾನ ಮಾಡುವ ಸಲುವಾಗಿ ನಗರದ ಜನತೆಗೆ ಹುಮ್ಮಸ್ಸು ತುಂಬಿಸುವ ಸಲುವಾಗಿ ಹಾಗೂ ಚುನಾವಣಾ ಹಬ್ಬಕ್ಕಾಗಿ ಈ 5 ಪ್ರಮುಖ ವ್ಯಕ್ತಿಗಳು ನಮ್ಮ ಜೊತೆ ಕೈಜೋಡಿಸಿ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಿದ್ದಾರೆ” ಎಂದರು.

“ವ್ಯವಸ್ಥಿತವಾಗಿ ಮತದಾನ ಮಾಡುವ ಸಲುವಾಗಿ 10 ದಿನಗಳ ಮುಂಚಿತವಾಗಿಯೇ ಮತದಾನದ ಚೀಟಿ ಹಾಗೂ ಮತಗಟ್ಟೆಯ ಮಾಹಿತಿ ನೀಡಲಾಗುವುದು. ಇಲ್ಲವೇ, ವಿ.ಹೆಚ್.ಎ ತಂತ್ರಾಂಶದಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆ ನಮೂದಿಸಿದರೆ ಸಾಕು ಎಲ್ಲಾ ಮಾಹಿತಿ ಲಭ್ಯವಾಗಲಿದೆ” ಎಂದು ಹೇಳಿದರು.

Advertisements

“ಮತ ಚಲಾಯಿಸುವುದು ಎಲ್ಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಹಿಂದಿನ ದಿನಗಳಲ್ಲಿ ಮತದಾನ ಮಾಡುವ ದಿನ ಮತಗಟ್ಟೆಗಳ ಬಳಿ ಯಾವುದೇ ರೀತಿಯ ಸೌಲಭ್ಯಗಳು ಇರುತ್ತಿರಲಿಲ್ಲ. ಆದರೀಗ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿದ್ದರೂ ಕೂಡಾ ಮತ ಚಲಾಯಿಸುವ ಸಂಖ್ಯೆ ಬಹಳಷ್ಟು ಕಡಿಮೆಯಿದೆ. ನಿಮಗೆ ಮತ ಚಲಾಯಿಸಲು ಇಷ್ಟವಿಲ್ಲದಿದ್ದರೆ, ನೋಟ ಮಾಡಲು ಕೂಡಾ ಅವಕಾಶವಿರುತ್ತದೆ. ಆದ್ದರಿಂದ ಎಲ್ಲರೂ ಮತ ಚಲಾಯಿಸಿ” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಈಜಿಪುರ ಮೇಲ್ಸೇತುವೆಯ ಸ್ಥಳ ಇದೀಗ ‘ಸ್ಮಾರಕ’; ನೆಟ್ಟಿಗರ ಅಪಹಾಸ್ಯ

ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ ಅವರು ಮಾತನಾಡಿ, “ಮುಂಬರುವ ಚುನಾಣೆಯಲ್ಲಿ ಮತದಾರರು ಉತ್ತಮ ರೀತಿಯಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಬೇಕು. ಬೆಂಗಳೂರು ನಗರ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಆದರೆ, ಮತ ಚಲಾವಣೆಯಲ್ಲಿ ಮಾತ್ರ ಶೇಕಡಾವಾರು ಸಾಕಷ್ಟು ಹಿಂದಿದ್ದಾರೆ. ಈ ಬಗ್ಗೆ ನಾಗರಿಕರಲ್ಲಿ ಹೆಚ್ಚು ಜಾಗೃತಿ ಮೂಡಿಸಿ ಎಲ್ಲರೂ ಮತದಾನ ಮಾಡುವಂತೆ ಮಾಡಬೇಕು” ಎಂದು ತಿಳಿಸಿದರು.

ನಮ್ಮ ಬೆಂಗಳೂರು ಐಕಾನ್ಸ್’ಗಳ ವಿವರ

  • ಅನುಪ್ ಶ್ರೀಧರ್, ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಚಾಂಪಿಯನ್(ಅರ್ಜುನ ಪ್ರಶಸ್ತಿ ವಿಜೇತರು)
  • ಶರತ್ ಎಂ. ಗಾಯಕ್ವಾಡ್, ಅಂತಾರಾಷ್ಟ್ರೀಯ ಪ್ಯಾರಾ ಈಜುಗಾರರು.
  • ಮೋಹನ್ ಕುಮಾರ್ ಎನ್, ಬುಡಕಟ್ಟು ಜನಾಂಗದ ಗಾಯಕರು.
  • ಆನಂದ್ ಹೆಚ್(ಮಾಸ್ಟರ್ ಆನಂದ್), ಕನ್ನಡ ಚಿತ್ರ ಮತ್ತು ಕಿರುತೆರೆ ಕಲಾವಿದ ಮತ್ತು ನಿರೂಪಕರು.
  • ತೇಜಸ್ವಿನಿ ಬಾಯ್ ವಿ, ಅಂತಾರಾಷ್ಟ್ರೀಯ ಕಬ್ಬಡಿ ಆಟಗಾರ್ತಿ(ಅರ್ಜುನ ಪ್ರಶಸ್ತಿ ವಿಜೇತರು)

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X