ಉಡುಪಿ | ದೇವರ ದಾಸಿಮಯ್ಯರ ವಚನಗಳು ಕನ್ನಡ ಸಾಹಿತ್ಯಕ್ಕೆ ದೊರಕಿದ ಅದ್ಭುತ ಕೊಡುಗೆ – ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

Date:

Advertisements

ದೇವರ ದಾಸಿಮಯ್ಯನವರು 176 ಕ್ಕೂ ಹೆಚ್ಚು ವಚನಗಳನ್ನು ರಚಿಸಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅದ್ಭುತ ಕೊಡುಗೆಯನ್ನಾಗಿ ನೀಡಿದ್ದಾರೆ. ಅವರು ಬರೆದ ವಚನಗಳಲ್ಲಿ ಭಕ್ತಿಯ ಸ್ವಾರಸ್ಯ ಅಡಗಿದ್ದು, ತಮ್ಮ ವೃತ್ತಿಯನ್ನು ನಿರ್ವಹಿಸುತ್ತಲೇ ಸಮಾಜದ ಬದಲಾವಣೆಗೆ ವಿಶೇಷವಾದ ಸೇವೆಯನ್ನು ಸಲ್ಲಿಸಿಕೊಂಡು ಬಂದಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನೇಕಾರ ಸಮುದಾಯವು ತಮ್ಮ ಕುಲಕಸುಬಿನ ಮೂಲಕ ಜೀವನವನ್ನು ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ ಸಹ ದೇಶ ಹಾಗೂ ನಾಡಿನ ಏಳಿಗೆಗಾಗಿ ಶ್ರಮಿಸಬೇಕು ಎಂದ ಅವರು, ದೇವರದಾಸಿಮಯ್ಯನವರು ವಚನ ಸಾಹಿತ್ಯದಲ್ಲಿ ತಮ್ಮ ವಚನಗಳಿಂದಲೇ ಹೊಸ ಛಾಪು ಮೂಡಿಸಿದ್ದಾರೆ ಎಂದರು.

Advertisements
1004897940

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗದೇ ಮಹನೀಯರು ಸಮಾಜಕ್ಕೆ ಸಲ್ಲಿಸಿದ ಸೇವೆಗಳನ್ನು ನೆನೆಯುವ ಮೂಲಕ ಅವರಿಗೆ ಗೌರವ ಸಲ್ಲಿಸಿ ಜಯಂತಿ ಕಾರ್ಯಕ್ರಮಗಳಿಗೆ ಅರ್ಥಪೂರ್ಣ ಮಹತ್ವ ದೊರೆಯುವಂತಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶ್ರೀನಿವಾಸ್ ರಾವ್ ಮಾತನಾಡಿ, ದೇವರ ದಾಸಿಮಯ್ಯನವರು ಮಾಡುವ ಕಾಯಕದಲ್ಲಿ ದೇವರನ್ನು ಕಂಡವರು. ಅವರಂತೆಯೇ ಪ್ರತಿಯೊಬ್ಬರು ತಮ್ಮ ಕೆಲಸದಲ್ಲಿ ನಿಷ್ಠೆ ಹಾಗೂ ಶ್ರದ್ದೆಯನ್ನು ತೋರುವ ಮೂಲಕ ಪ್ರಾಮಾಣಿಕ ಸೇವೆಯನ್ನು ಸಲ್ಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಿಶ್ರಾಂತ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ಗಿರೀಶ್ ಶೆಟ್ಟಿಗಾರ್ ದಾಸಿಮಯ್ಯರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡುತ್ತಾ, ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಸರಳ ರೂಪದಲ್ಲಿ ವಚನ ಸಾಹಿತ್ಯಗಳ ಆಧ್ಯಾತ್ಮಿಕ ಸಾರವನ್ನು ಪ್ರಚಾರ ಪಡಿಸಿದ ದೇವರ ದಾಸಿಮಯ್ಯನವರು, ಅನ್ಯಾಯ, ಅನಾಚಾರ, ವಾಮಮಾರ್ಗಗಳಿಂದ ಗಳಿಸಿರುವುದು ಎಂದಿಗೂ ನಮಗೆ ದಕ್ಕುವುದಿಲ್ಲ ಎಂದು ತಮ್ಮ ವಚನಗಳ ಮೂಲಕ ಸ್ಪಷ್ಠವಾಗಿ ವಿವರಿಸಿದ್ದಾರೆ. ಮಹಾತ್ಮರು ನಡೆದು ಬಂದ ದಾರಿಯನ್ನು ವಿಮರ್ಶೆ ಮಾಡಿಕೊಳ್ಳಲು ಹಾಗೂ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಕೊಳ್ಳುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಮಹನೀಯರ ಜಯಂತಿಗಳನ್ನು ಆಚರಿಸಲಾಗುತ್ತಿದ್ದು, ಅವರ ವಚನಗಳನ್ನು ಪ್ರತಿಯೊಬ್ಬರೂ ಪಾಲಿಸಿ, ಸುವ್ಯವಸ್ಥಿತ ಸಮಾಜ ನಿರ್ಮಾಣ ಮಾಡುವಲ್ಲಿ ಕೈಜೋಡಿಸಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾಸಭಾ(ರಿ)ದ ಜಿಲ್ಲಾಧ್ಯಕ್ಷ ರವಿ ಶೆಟ್ಟಿಗಾರ್, ವಿದ್ಯಾವರ್ಧಕ ಸಂಘದ ಅಧ್ಯಕ್ಷ ಲಕ್ಷ್ಮಣ ಕೊಡಿಯಾಲ್ ಬೈಲ್, ನೇಕಾರ ಸಮುದಾಯದ ಮುಂಖಡರು ಹಾಗೂ ಇತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಉಪನ್ಯಾಸಕ ಪ್ರದೀಪ್ ಹಾವಂಜೆ ನಿರೂಪಿಸಿದರೆ, ಜಯರಾಮ್ ಶೆಟ್ಟಿಗಾರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X