ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏಪ್ರಿಲ್ 6 ಮತ್ತು 7 ರಂದು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಅಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಏಪ್ರಿಲ್ 5 ರಂದು ಬೆಳಿಗ್ಗೆ 10 ಗಂಟೆಗೆ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸುವರು.
ಕಾರ್ಮಿಕ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಹಾಗೂ ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೆ.ಎನ್.ಗಣೇಶ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜ್ಜಂಪೀರ್.ಎಸ್.ಖಾದ್ರಿ ವಿಶೇಷ ಅತಿಥಿಗಳಾಗಿ ಭಾಗವಹಿಸುವರು.
ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರ ರಾಮಪ್ಪ ಕೃಷ್ಣಪ್ಪ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಎಂ.ಬ್ಯಾಕೋಡ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಆಯೋಜಿಸಿರುವ ಕ್ರೀಡಾಕೂಟದಲ್ಲಿ 42 ಕ್ಕೂ ಹೆಚ್ಚು ವಿವಿಧ ರೀತಿಯ ವೈಯಕ್ತಿಕ ಹಾಗೂ 15 ಗುಂಪು ಕ್ರೀಡಾ ಸ್ಪರ್ಧೆಗಳು ಜರುಗಲಿವೆ. ಈಗಾಗಲೇ ಜಿಲ್ಲೆಯ 1720 ಜನ ಕ್ರೀಡಾ ಆಕಾಂಕ್ಷಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಕ್ರೀಡಾ ಕಾರ್ಯದರ್ಶಿ ಸುರೇಶ ಜಟ್ಟೆನ್ನವರ, ಪಿ.ಎಫ್.ಗುಡೇನಕಟ್ಟಿ ಮತ್ತು ಅಯ್ಯಪ್ಪ ಮೊಖಾಶಿ ಅವರು ಕ್ರೀಡೆಗಳನ್ನು ನಿರ್ಣಾಯಕರೊಂದಿಗೆ ಸಂಯೋಜಿಸಲಿದ್ದಾರೆ ಎಂದು ಯುವ ಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಎಮ್.ಟಿ. ತಿಳಿಸಿದ್ದಾರೆ.