ಜನರ ಆಶೀರ್ವಾದ ಗಾಳಿಗೆ ತೂರಿ ಸಿಎಂ ಅಧಿಕಾರ: ಬಿ ವೈ ವಿಜಯೇಂದ್ರ

Date:

Advertisements

ಜನರ ವಿಶ್ವಾಸ ಮತ್ತು ಆಶೀರ್ವಾದ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದೀಗ ಎಲ್ಲವನ್ನೂ ಗಾಳಿಗೆ ತೂರಿ ರೈತರು, ಬಡವರು ಹಾಗೂ ಜನಸಾಮಾನ್ಯರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ದರಿದ್ರ- ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ. 40 ಶೇಕಡಾ ಸರಕಾರ ಎಂದು ಬಿಜೆಪಿಯನ್ನು ಕರೆದಿದ್ದರು. ಅದಕ್ಕೆ ಪುರಾವೆ ಇಲ್ಲ. ನಾವು ಮುಗ್ಗರಿಸಿದ್ದೂ ಆಗಿದೆ. ಬಿಜೆಪಿ ನಿರಂತರ ಹೋರಾಟ ಮಾಡುವ ಮೂಲಕ ಈ ಸರಕಾರಕ್ಕೆ ತಕ್ಕ ಶಾಸ್ತಿ ಮಾಡಲಿದೆ” ಎಂದರು.

ಕಳಚಿ ಬಿದ್ದ ಸಿದ್ದರಾಮಯ್ಯನವರ ಮುಖವಾಡ

Advertisements

“ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಕಪಟ ಸಮಾಜವಾದಿ ಮುಖವಾಡ ಈ ಅಧಿಕಾರಾವಧಿಯಲ್ಲಿ ಕಳಚಿ ಬಿದ್ದಿದೆ. ಹಿಂದೆ ಬಿಜೆಪಿ ಸರಕಾರ ಅತ್ಯುತ್ತಮವಾಗಿ ಕೆಲಸ ಮಾಡಿದ್ದರೂ ಸಹ ಅಂದಿನ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ಸಿಗರು ಸಾಕಷ್ಟು ಅಪಪ್ರಚಾರ ಮಾಡಿದರು. ಜನರ ಒಳಿತಿಗಾಗಿ ಈ ಸರಕಾರ ಬಂದಿಲ್ಲ; ಜನರ ಒಳಿತಿಗಾಗಿ ಅಧಿಕಾರ ಪಡೆದಿದ್ದರೆ ಇಂಥ ದರಿದ್ರ ಸರಕಾರವನ್ನು ಜನತೆ ನೋಡಬೇಕಿರಲಿಲ್ಲ” ಎಂದು ಹೇಳಿದರು.

“ಹೈಕಮಾಂಡ್ ಅಥವಾ ಗಾಂಧಿ ಕುಟುಂಬಕ್ಕೆ ಕರ್ನಾಟಕ ರಾಜ್ಯವನ್ನು ಅಡ ಇಡಲು ಮತ್ತು ಚುನಾವಣೆ ವೇಳೆ ಎಟಿಎಂ ಆಗಿ ಪರಿವರ್ತಿಸಲು ಕಾಂಗ್ರೆಸ್ಸಿಗೆ ಇಲ್ಲಿ ಸರಕಾರ ಬೇಕಿದೆ. ಹಿಂದಿನ ಬಿಜೆಪಿ ಸರಕಾರದ ಮೇಲಿನ ಅಪಪ್ರಚಾರವನ್ನು ನಾವು ಸರಿಯಾಗಿ ನಿಭಾಯಿಸಿಲ್ಲ. ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಅದರ ಪರಿಣಾಮವಾಗಿ ವಿಪಕ್ಷದಲ್ಲಿದ್ದೇವೆ. ಅದರ ಬಗ್ಗೆ ನೋವಿಲ್ಲ” ಎಂದು ತಿಳಿಸಿದರು.

ಜನಜಾಗೃತಿ ಮೂಡಿಸಲು ಜನಾಕ್ರೋಶ ಯಾತ್ರೆ

“ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆ ಮತ್ತು ಸರಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ, ಪರಿಶಿಷ್ಟ ಜಾತಿ, ಜನಾಂಗದ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‍ಇಪಿ, ಟಿಎಸ್‍ಪಿ ಹಣ ದುರ್ಬಳಕೆ- ಇವೆಲ್ಲವನ್ನೂ ರಾಜ್ಯದ ಜನತೆ ಮುಂದೆ ತೆಗೆದುಕೊಂಡು ಹೋಗುತ್ತೇವೆ. ನಿನ್ನೆ ಆರಂಭವಾದ ಅಹೋರಾತ್ರಿ ಧರಣಿಯ ಹೋರಾಟವು ಏ.7ರಿಂದ ಪ್ರಾರಂಭವಾಗುವ ಜನಾಕ್ರೋಶ ಯಾತ್ರೆ ಮೂಲಕ ರಾಜ್ಯದ ಪ್ರತಿ ಜಿಲ್ಲೆಗೆ ತಲುಪಲಿದೆ” ಎಂದು ಹೇಳಿದರು.

ವಕ್ಫ್ ಹಗರಣದಲ್ಲಿ ಕಾಂಗ್ರೆಸ್ಸಿನ ಅನೇಕ ಮುಖಂಡರ ಹೆಸರು

“ಕಾಂಗ್ರೆಸ್ಸಿಗರು ವಕ್ಫ್ ಹೆಸರು ಹೇಳಿ ಲಕ್ಷಾಂತರ ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದವರು; ಇದಕ್ಕೆ ಕರ್ನಾಟಕವೇ ತಾಜಾ ಉದಾಹರಣೆ. ಈ ಹಗರಣದಲ್ಲಿ ಕಾಂಗ್ರೆಸ್ಸಿನ ಅನೇಕ ಮುಖಂಡರ ಹೆಸರು ಕೂಡ ಈ ಹಿಂದೆಯೂ ಕೇಳಿಬಂದಿತ್ತು. ಹಾಗಾಗಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ಸಿನವರು ಸಹಜವಾಗಿಯೇ ವಿರೋಧಿಸುತ್ತಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
ಏಕಾಏಕಿ ವಕ್ಫ್ ಹೆಸರು ಹೇಳಿಕೊಂಡು ಸಾವಿರಾರು ವರ್ಷಗಳ ಇತಿಹಾಸ ಇರುವ ಮಠಮಾನ್ಯಗಳ, ದೇವಾಲಯಗಳ ಜಮೀನನ್ನು ವಶಕ್ಕೆ ಪಡೆಯುತ್ತಿದ್ದರು. ನಮ್ಮ ರಾಜ್ಯದಲ್ಲೂ ರೈತರ ಜಮೀನು ಕಬ್ಜಾ ಮಾಡಿಕೊಂಡಿದ್ದಾರೆ. ಅದನ್ನು ಯಾರಿಗೂ ಪ್ರಶ್ನೆ ಮಾಡಲು ಅವಕಾಶ ಇಲ್ಲದಿದ್ದರೆ ಇದ್ಯಾವ ನ್ಯಾಯ” ಎಂದು ಪ್ರಶ್ನೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X