ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಮೂಲಸೌಲಭ್ಯ ಕಲ್ಪಿಸಿ ಗುಣಮಟ್ಟದ ಶಿಕ್ಷಣ ದೊರಕಿಸಲು ಕಾಳಜಿ ವಹಿಸಲಾಗಿದೆ. ತಾಂತ್ರಿಕ ಶಿಕ್ಷಣ ದೊರಕಿಸಿ, ಗ್ರಾಮೀಣ ಪ್ರದೇಶದ ಯುವ ಸಮೂಹದ ಕೌಶಲ್ಯ ಹೆಚ್ಚಿಸುವುದರಿಂದ ಭವಿಷ್ಯದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳು ಸಿಗಲಿವೆ” ಎಂದು ಶಾಸಕ ಶ್ರೀನಿವಾಸ್ ಮಾನೆ ಅವರು ಪಾಲಿಟೆಕ್ನಿಕ್ ಕಾಲೇಜಿನ ಐದು ಕೋಟಿ ರೂ ಚಾಲನೆ ನೀಡಿ ಹೇಳಿದರು.
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಪಟ್ಟಣದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2023-24 ನೇ ಸಾಲಿನ ರಾಜ್ಯ ಅಭಿವೃದ್ಧಿ ಕಾರ್ಯಕ್ರಮದಡಿ ಒಂದು ಕೋಟಿ 5 ಲಕ್ಷ ರೂ. ವೆಚ್ಚದಲ್ಲಿ ಮೊದಲ ಮಹಡಿ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ ನೀಡಿ ಮಾತನಾಡಿದರು.
“ಉದ್ಯೋಗಾಧಾರಿತ ಶಿಕ್ಷಣ ಪಡೆಯುವುದರಿಂದ ಸ್ಥಳೀಯ ಹಂತದಲ್ಲಿಯೇ ಸ್ವ ಉದ್ಯೋಗದಲ್ಲಿ ತೊಡಗುವ ಮೂಲಕ ಸ್ವಾವಲಂಬಿ ಜೀವನ ನಡೆಸಬಹುದಾಗಿದೆ. ಯುವ ಸಮೂಹದ ಕೌಶಲ್ಯ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ಕಾಳಜಿ ವಹಿಸಿದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಅಡಿಕೆ, ತೆಂಗು, ಹನಿ ನೀರಾವರಿ ಉಪಕರಣಗಳು ಬೆಂಕಿಗಾಹುತಿ, ರೈತ ಕಂಗಾಲು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಪರಶುರಾಮ ಖಂಡೂನವರ, ಉಪಾಧ್ಯಕ್ಷೆ ವೀಣಾ ಗುಡಿ, ಪ್ರಾಚಾರ್ಯ ಜಗದೀಶ ತಾವರೆ, ಪುರಸಭೆ ಮಾಜಿ ಅಧ್ಯಕ್ಷ ಖುರ್ಷಿದ್ ಹುಲ್ಲತ್ತಿ ಮುಖಂಡರಾದ ರಾಜೂ ಗುಡಿ, ರವಿ ದೇಶಪಾಂಡೆ, ಸಿಕಂದರ್ ವಾಲಿಕಾರ, ಮಾಲತೇಶ ಕಾಳೇರ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.