ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಬಲೋಗಾ ಗ್ರಾಮದ ಶಿವನಗೌಡ ಪಾಟೀಲ್ (47) ಅವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಭೀಕರವಾಗಿ ಕೊಲೆ ಮಾಡಿದ ಆರೋಪಿಯನ್ನು ಕಲಬುರಗಿಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.
ಘಟನೆ ವಿವರ
ಖಾನಾಪುರ ತಾಲೂಕಿನ ಗಾಡಿಕೊಪ್ಪ ಗ್ರಾಮದ ಬಳಿ ಮೃತದೇಹ ಪತ್ತೆಯಾಗಿದ್ದು, ತಲೆಗೆ ಕಲ್ಲಿನಿಂದ ಹೊಡೆದು ಹತ್ಯೆ ಮಾಡಲಾಗಿದೆ. ಮೃತನನ್ನು ಶಿವನಗೌಡ ಪಾಟೀಲ್ ಎಂದು ಗುರುತಿಸಲಾಗಿದೆ.
ಆರೋಪಿ ಪತ್ತೆ & ಬಂಧನ
ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ 24 ಗಂಟೆಗಳೊಳಗೆ ಆರೋಪಿ ಬೀಡಿ ಗ್ರಾಮದ ಬಸಪ್ಪ ಹೊಸಟ್ಟಿ ಅವರನ್ನು ಕಲಬುರಗಿಯಲ್ಲಿ ಬಂಧಿಸಿದ್ದಾರೆ. ಕೊಲೆ ನಡೆಸಿದ ಬಳಿಕ ಆರೋಪಿ ಕಲಬುರಗಿಗೆ ಪರಾರಿಯಾಗಿದ್ದ, ಅಲ್ಲಿಂದ ವಶಕ್ಕೆ ಪಡೆಯಲಾಗಿದೆ.
ಸತ್ಯಸ್ವೀಕಾರ
ಆರೋಪಿ ತಾನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದು, ಕೊಲೆಗೆ ಮುನ್ನ ಮೃತನನ್ನು ಮನೆಯಿಂದ ಕರೆದುಕೊಂಡು ಸರಾಯಿ ಕುಡಿಸಿ, ನಂತರ ಜಮೀನಿಗೆ ಕರೆದೊಯ್ದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.