2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ: ಶಾಲಾ ಕರ್ತವ್ಯ ದಿನ ಮತ್ತು ರಜೆ ಬಗ್ಗೆ ಇಲ್ಲಿದೆ ಮಾಹಿತಿ

Date:

Advertisements

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು 2025-26ರ ಸಾಲಿನ ಶೈಕ್ಷಣಿಕ ವೇಳಾ ಪಟ್ಟಿಯನ್ನು ಪ್ರಕಟಿಸಿ, ಶಾಲಾ ಕರ್ತವ್ಯದ ದಿನಗಳು ಮತ್ತು ರಜಾ ಅವಧಿ ಬಗ್ಗೆ ಮಾಹಿತಿ ನೀಡಿದೆ.

ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿಗಳು ಮತ್ತು ರಜಾ ಅವಧಿಗಳು ಅನ್ವಯವಾಗಲಿದೆ ಎಂದು ಶಿಕ್ಷಣ ಇಲಾಖೆ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ 2025 ಮೇ 29ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ.

Advertisements

ಹಾಗೆಯೇ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ. ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ನಿಗದಿಪಡಿಸಲಾಗಿದೆ.

2025-26 ನೇ ಸಾಲಿನ ಶಾಲಾ ಕರ್ತವ್ಯದ ದಿನಗಳು

ಮೊದಲನೇ ಅವಧಿ: 2025 ಮೇ 28 ರಿಂದ ಸೆಪ್ಟೆಂಬರ್​ 19 ರವರೆಗೆ
ಎರಡನೇ ಅವಧಿ: 2025 ಅಕ್ಟೋಬರ್​ 08 ರಿಂದ 2026 ಏಪ್ರಿಲ್​ 10 ರವರೆಗೆ

ರಜಾ ದಿನಗಳು

ದಸರಾ ರಜೆ: 2025 ಸೆಪ್ಟೆಂಬರ್​ 20 ರಿಂದ ಅಕ್ಟೋಬರ್​​ 07 ರವರೆಗೆ
ಬೇಸಿಗೆ ರಜೆ: 2026 ಏಪ್ರಿಲ್​​ 11 ರಿಂದ 2026 ಮೇ​ 28 ರವರೆಗೆ

2025-26ರ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟು 123 ರಜಾ ದಿನಗಳಿದ್ದು, ಉಳಿದ 242 ದಿನ ಶಾಲೆಗಳು ನಡೆಯಲಿವೆ. ಪರೀಕ್ಷೆ ಮತ್ತು ಮೌಲ್ಯಾಂಕನ ಕಾರ್ಯಕ್ಕಾಗಿ 26 ದಿನಗಳು, ಪಠ್ಯೇತರ ಚಟುವಟಿಕೆ, ಪಠ್ಯ ಚಟುವಟಿಕೆ, ಸ್ಪರ್ಧೆಗಳ ನಿರ್ವಹಣಾ ಕಾರ್ಯಕ್ಕಾಗಿ 22 ದಿನ, ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನ, ಶಾಲಾ ಸ್ಥಳೀಯ ರಜೆಗಳಿಗೆ 04 ದಿನ ಮತ್ತು ಬೋಧನಾ ಕಲಿಕಾ ಪ್ರಕ್ರಿಯೆಗೆ ಉಳಿಯುವ ಕರ್ತವ್ಯಕ್ಕೆ 178 ದಿನಗಳನ್ನು ಮೀಸಲಿಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X