ತುಂಗಭದ್ರಾ ಎಡದಂಡೆ ಕಾಲುವೆ ನೀರು ಯಾವುದೇ ರೀತಿಯಲ್ಲಿ ಅನಾವಶ್ಯಕವಾಗಿ ವ್ಯಯ ಆಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಕಲಬುರಗಿ ವಿಭಾಗದ ಪ್ರಭಾರ ಪ್ರಾದೇಶಿಕ ಆಯುಕ್ತ ಎಂ. ಸುಂದರೇಶ ಬಾಬು ಹೇಳಿದರು.
ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಟಿಎಲ್‌ಬಿಸಿ ನೀರು ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, “3 ಸಾವಿರ ಕ್ಯೂಸೆಕ್ಸ್ ನೀರನ್ನು ಪ್ರತಿದಿನ ಬಿಡಬೇಕು. ಸಂಬಂಧಿಸಿದ ಡಿಸ್ಟ್ರಿಬ್ಯೂಟ್‌ಗಳಲ್ಲಿ ಈಗಾಗಲೇ ಆದೇಶಿಸಿದಂತೆ ಗೇಜ್‌ಗಳ ನಿಯಂತ್ರಣ ಮಾಡಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು. ಯಾವುದೇ ರೀತಿಯಲ್ಲಿ ನೀರು ವ್ಯಯ ಆಗದಂತೆ ನೋಡಿಕೊಳ್ಳಬೇಕು” ಎಂದು ಸೂಚನೆ ನೀಡಿದರು.
ಇದನ್ನೂ ಓದಿ: ಕೊಪ್ಪಳ | ಸೇವಾ ನೂನ್ಯತೆ; ಓಲಾ ಎಲೆಕ್ಟ್ರಿಕ್ ವಾಹನ ಕಂಪನಿಗೆ ದಂಡ
ಸಭೆಯಲ್ಲಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಟಿಎಲ್‌ಬಿಸಿ ಸಮಿತಿ ಸದಸ್ಯರು ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಜೂಮ್ ವಿಡಿಯೋ ಕಾನ್ಪರೇನ್ಸ ಸಭೆಯಲ್ಲಿ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು. ಅಪರ ಜಿಲ್ಲಾಧಿಕಾರಿಗಳು. ಸಹಾಯಕ ಆಯುಕ್ತರು. ತುಂಗಭದ್ರಾ ಎಡದಂಡೆ ನಿರ್ವಹಣೆ ಎಸ್.ಇ ಹಾಗೂ ಇಇ ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರರು. ಟಾಸ್ಕಪೋರ್ಸ್ ಸಮಿತಿಯವರು ಸೇರಿದಂತೆ ಇತರೆ ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಇತರರು.