ವಿದ್ಯುತ್ ತಂತಿಗೆ ದೋಟಿ ತಗುಲಿ ಯುವ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬೀರೂರು ವ್ಯಾಪ್ತಿಯ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪ್ರದೀಪ (36) ಎಂದು ಗುರುತಿಸಲಾಗಿದೆ. ಸ್ವಂತ ತೋಟದಲ್ಲಿ ಪ್ರದೀಪ ಅಲ್ಯುಮಿನಿಯಂನ ದೋಟಿಯಲ್ಲಿ ತೆಂಗಿನಕಾಯಿ ಕೀಳುತ್ತಿದ್ದಾಗ ಪಕ್ಕದಲ್ಲಿದ್ದ ವಿದ್ಯುತ್ ತಂತಿಗೆ ದೋಟಿ ಸ್ಪರ್ಶಿಸಿದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಾಲ ಬಾದೆ; ರೈತ ಆತ್ಮಹತ್ಯೆ
ಮೃತ ರೈತನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.