ಇಂದಿನಿಂದ ಮೂರು ದಿನ ನೂತನ ಶಾಸಕರಿಗೆ ತರಬೇತಿ ಶಿಬಿರ

Date:

Advertisements

ಹೊಸದಾಗಿ ವಿಧಾನಸಭೆ ಪ್ರವೇಶಿಸುವ ಶಾಸಕರಿಗೆ ಅಗತ್ಯ ತರಬೇತಿ ನೀಡುವುದು ಎಂದಿನ ವಾಡಿಕೆ. ಅದೇ ರೀತಿ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಸಂಸದೀಯ ಕಲಾಪದ ಕುರಿತು ಅರಿವು ಮೂಡಿಸಲು ನೆಲಮಂಗಲದಲ್ಲಿರುವ ಧರ್ಮಸ್ಥಳ ಕ್ಷೇಮವನದಲ್ಲಿ ಜೂ. 26 ರಿಂದ 28ರ ವರೆಗೆ ಮೂರು ದಿನಗಳ ಕಾಲ ತರಬೇತಿ ಶಿಬಿರ ನಡೆಯಲಿದೆ.

ಶಿಬಿರವನ್ನು ಜೂ. 26ರಂದು ಬೆಳಗ್ಗೆ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸ್ಪೀಕರ್ ಯು ಟಿ ಖಾದರ್ ಅಧ್ಯಕ್ಷತೆ ವಹಿಸುವರು. ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ ಕೆ ಪಾಟೀಲ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ ಜೆ ಜಾರ್ಜ್, ವಸತಿ ಸಚಿವ ಜಮೀ‌ರ್‌ ಅಹ್ಮದ್‌ ಖಾನ್ ಉಪಸ್ಥಿತರಿರಲಿದ್ದಾರೆ.

ಮೂರೂ ದಿನ ಬೆಳಗ್ಗೆ 6ರಿಂದ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆ ನಡೆಯಲಿದೆ. 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಕಲಾಪದಲ್ಲಿ ಭಾಗವಹಿಸುವಿಕೆ, ನಿಲುವಳಿ ಸೂಚನೆ, ನಿಯಮ-69, ವಿಶ್ವಾಸ ಮತ್ತು ಅವಿಶ್ವಾಸ ನಿರ್ಣಯ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾರ್ಗದರ್ಶನ ನೀಡಲಿದ್ದಾರೆ.

Advertisements

ಮಾಜಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಾಸನ ರಚನೆ ಮತ್ತು ಅದರಲ್ಲಿ ಸದಸ್ಯರುಗಳ ಭಾಗವಹಿಸುವಿಕೆ ಮತ್ತು ಉಭಯ ಸದನಗಳ ಸಂಬಂಧ ಕುರಿತು ಮಾತನಾಡಲಿದ್ದಾರೆ. ಟಿ ಬಿ ಜಯಚಂದ್ರ ಅವರು ಶಾಸಕರ ಕರ್ತವ್ಯಗಳು, ಜವಾಬ್ದಾರಿ ಮತ್ತು ಹಕ್ಕುಬಾಧ್ಯತೆಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಮಾನ್ಯ ಸಭಾಧ್ಯಕ್ಷ ಖಾದರ್ ಅವರು ನೂತನ ಶಾಸಕರಿಗೆ ಯಾವ ದಿಕ್ಕು ತೋರಿಸುತ್ತಿದ್ದಾರೆ?

ಪರಿಷತ್‌ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಅವರು ಸದಸ್ಯರು ಅಳವಡಿಸಿಕೊಳ್ಳಬೇಕಾದ ನೀತಿ ನಿಯಮಗಳು, ಪಾಲಿಸಬೇಕಾದ ನಿಯಮಗಳು ಸಂಸದೀಯ ಭಾಷೆಯ ಬಳಕೆ ಮತ್ತು ಜನ ಮೆಚ್ಚಿದ ಶಾಸಕನಾಗುವುದು ಹೇಗೆ ಎಂದು ತಿಳಿಸಿಕೊಡಲಿದ್ದಾರೆ. ಶಾಸನ ಸಭೆಯಲ್ಲಿ ಕರ್ತವ್ಯದ ಹಾಸ್ಯಭರಿತ ನಿರ್ವಹಣೆ ಕುರಿತು ಮುಖ್ಯಮಂತ್ರಿ ಚಂದ್ರು ತಿಳಿಸಿಕೊಡಲಿದ್ದಾರೆ. ಬಿ ಎಸ್ ಯಡಿಯೂರಪ್ಪ, ಎಚ್ ಡಿ ಕುಮಾರಸ್ವಾಮಿ ಸಂವಾದ ನಡೆಸಲಿದ್ದಾರೆ.

ಮೊದಲ ದಿನ ಸಂಜೆ ಬ್ರಹ್ಮಕುಮಾರೀಸ್ ಸಂಸ್ಥೆಯ ಬಿ ಕೆ ವೀಣಾ ಮತ್ತು ಬಿ ಕೆ ಭುವನೇಶ್ವರಿ ಹಿತವಚನ ನೀಡಲಿದ್ದಾರೆ. ಸಾಮರಸ್ಯ ಸಮಾಜ ವಿಷಯದ ಕುರಿತು ಜೂ. 27ರಂದು ಸಂಜೆ ಡಿ ವೀರೇಂದ್ರ ಹೆಗ್ಗಡೆ, ಕೊನೆಯ ದಿನ ಬೆಳಗ್ಗೆ ಜನಪ್ರತಿನಿಧಿ ಮತ್ತು ಜನರ ಮಧ್ಯೆ ಸಂಬಂಧ ಬಾಂಧವ್ಯವನ್ನು ವೃದ್ಧಿಗೊಳಿಸುವುದು ವಿಷಯದ ಕುರಿತು ಜಮಾತೆ ಇಸ್ಲಾಮಿ ಹಿಂದ್‌ನ ಮಹಮ್ಮದ್ ಕುಂಞ ಮಾತನಾಡಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X