ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಆಂಗ್ಲ ಮಾಧ್ಯಮ ಮುಸ್ಲಿಂ ವಸತಿ ಶಾಲೆ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳ 2025-26ನೇ ಸಾಲಿನ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಏಪ್ರಿಲ್ 10ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್ website: https://sevasindhuservices.karnataka.gov.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ, ಮೌಲಾನಾ ಆಝಾದ್ ಭವನ, ಜಿಲ್ಲಾ ಪಂಚಾಯತ್ ರಸ್ತೆ ಕನಕದಾಸ ಬಡಾವಣೆ ತಾಲೂಕ ವಿಸ್ತರಾಣಾಧಿಕಾರಿಗಳು, ಉಪವಿಭಾಗ ವಿಜಯಪುರ ಮತ್ತು ಇಂಡಿ ಇವರನ್ನು ಹಾಗೂ ಅರಕೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ಬಾಲಕಿಯರ ವಸತಿ ಶಾಲೆ ಪ್ರಾಂಶುಪಾಲೆ ರೇಖಾ ಬಾರ್ಕಿ(ಮೊಬೈಲ್ ಸಂಖ್ಯೆ: 8971459683) ಅವಧಿ ವಿಸ್ತರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಅಧಿಕಾರ ದುರುಪಯೋಗ ಆರೋಪ; ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷರ ವಜಾಕ್ಕೆ ಒತ್ತಾಯ
ಸಿಂದಗಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಸಿದ್ದಪ್ಪ ಕಾರಿಮುಂಗಿ(:9980952960), ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಚಡಚಣ ತಾಲೂಕಿನ ಹಾಲಹಳ್ಳಿಯ ಪ್ರಾಂಶುಪಾಲ ಮಲ್ಲಿಕಾರ್ಜುನ ಹೆಬ್ಬಳ್ಳಿ(ಮೊಬೈಲ್ ಸಂಖ್ಯೆ: 9620828185), ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಅಫಜಲಪೂರ ಟಕ್ಕೆ ವಿಜಯಪುರದ ಪ್ರಾಂಶುಪಾಲ ಸಿದ್ರಾಮ್ ಎಂಟೆತ್ತ ಅವರ ಮೊ. 8310830407 ಸಂಪರ್ಕಿಸಬಹುದು ಎಂದು ಪತ್ರಿಕೆ ಪ್ರಕಟಣೆ ಮೂಲಕ ತಿಳಿಸಿದೆ.