ಬೀದರ್‌ | ಗುಣಮಟ್ಟದ ಶಿಕ್ಷಣ, ಸಂಸ್ಕಾರವೇ ವಿದ್ಯಾರ್ಥಿಗಳಿಗೆ ವರದಾನ: ಸಚಿವ ಶರಣಪ್ರಕಾಶ ಪಾಟೀಲ್

Date:

Advertisements

ವಿದ್ಯಾರ್ಥಿಗಳು ಪರಿಶ್ರಮ, ಪ್ರಾಮಾಣಿಕತೆ ಮತ್ತು ಸರಳತೆ ಎಂಬ ಈ ಮೂರು ಸೂತ್ರಗಳನ್ನು ಅನುಸರಿಸಿದರೆ ಜೀವನ ಯಶಸ್ವಿಯಾಗಲಿದೆ. ತಾವು ಅಂದುಕೊಂಡ ಕನಸು ನನಸಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ ಶರಣಪ್ರಕಾಶ ಪಾಟೀಲ್ ಹೇಳಿದರು.

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪ ಆಡಿಟೋರಿಯಂನಲ್ಲಿ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ವತಿಯಿಂದ ಶನಿವಾರ ಆಯೋಜಿಸಿದ್ದ 2023ರ ನೀಟ್-ಐಐಟಿ ಸಾಧಕರ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

“ಹಿಂದುಳಿದ ಪ್ರದೇಶದ ಕಲ್ಯಾಣಕ್ಕಾಗಿ ಡಾ.ಬಸವಲಿಂಗ ಪಟ್ಟದ್ದೇವರು ವಿದ್ಯಾ ಮಂದಿರ ತೆರೆದು ಭೇದಭಾವ ಇಲ್ಲದೇ ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ, ಸಂಸ್ಕಾರ ಕಲ್ಪಿಸುತ್ತಿರುವುದು ಶ್ಲಾಘನೀಯ. 40 ಮಕ್ಕಳಿಂದ ಆರಂಭಗೊಂಡ ಶಿಕ್ಷಣ ಸಂಸ್ಥೆಯಲ್ಲಿಂದು 20 ಸಾವಿರ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಅದ್ಭುತ ಕಾರ್ಯ. ಇದರ ಹಿಂದೆ ಶ್ರೀಗಳ ಅವಿರತ ಶ್ರಮ ಅಡಗಿದೆ. ಸರ್ಕಾರಕ್ಕೆ ಸವಾಲು ಆಗಿರುವ ಇಂತಹ ಕೆಲಸಗಳನ್ನು ಈ ಭಾಗದಲ್ಲಿ ಶ್ರೀಗಳು ಯಾವುದೇ ಫಲಾಪೇಕ್ಷೆ ಇಲ್ಲದೇ ಮಾಡುತ್ತಿರುವುದು ಸಂತಸ ತರಿಸಿದೆ” ಎಂದರು.

Advertisements

“ಈ ಸಂಸ್ಥೆಯ ನೂರಾರು ವಿದ್ಯಾರ್ಥಿಗಳು ಪ್ರತಿವರ್ಷ ನೀಟ್, ಐಐಟಿ ಸೇರಿದಂತೆ ಹಲವು ಕೋರ್ಸ್‌ಗಳಲ್ಲಿ ಉತ್ತಮ ರ‍್ಯಾಂಕ್ ಪಡೆದು ರಾಷ್ಟ್ರದ ಗಮನ ಸೆಳೆಯುತ್ತಿರುವುದು ಕಲ್ಯಾಣ ಕರ್ನಾಟಕದ ಹೆಮ್ಮೆ” ಎಂದು ಬಣ್ಣಿಸಿದರು.

“ಗುಣಮಟ್ಟದ ಶಿಕ್ಷಣ, ಸಂಸ್ಕಾರ, ಉತ್ತಮ ಪರಿಸರ ಇಲ್ಲಿರುವುದು ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಇಂತಹ ಸೌಲಭ್ಯಗಳ ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಇನ್ನೂ ಹೆಚ್ಚೆಚ್ಚು ರಂಗಗಳಲ್ಲಿ ಸಾಧನೆ ಮಾಡಬೇಕು” ಎಂದು ಕಿವಿಮಾತು ಹೇಳಿದರು.

ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ನ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, “ಧರ್ಮ ಪ್ರಚಾರ ಪ್ರಸಾರದ ಜತೆಗೆ ಗಡಿ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಸಣ್ಣದಾಗಿ ಆರಂಭಿಸಿದ ಶಿಕ್ಷಣ ಸಂಸ್ಥೆ ಇಂದು ಬಸವ ಗುರುವಿನ ಶಕ್ತಿ, ನಮ್ಮ ಗುರುಗಳ ಆಶೀರ್ವಾದಿಂದ ರಾಜ್ಯದಲ್ಲಿಯೇ ವಿಶಿಷ್ಟವಾಗಿ ಗುರುತಿಸಿಕೊಂಡು ದೊಡ್ಡದಾಗಿ ಬೆಳೆದಿರುವುದರ ಹಿಂದೆ ಎಲ್ಲರ ಶ್ರಮವಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್ | ಜಯದೇವಿತಾಯಿ ಲಿಗಾಡೆ ನಮ್ಮ ನಾಡಿನ ಅತಿಮಬ್ಬೆ: ಮೀನಾಕ್ಷಿ ಬಾಳಿ

ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, “ನಿಜವಾದ ಭಾರತ ಹಳ್ಳಿಗಳಲ್ಲಿ ಅಡಗಿದೆ. ಹಳ್ಳಿ ಅಭಿವೃದ್ಧಿ ಆದರೆ ದೇಶದ ಪ್ರಗತಿ ಎನ್ನುವಂತೆ, ನಮ್ಮ ಪರಮ ಪೂಜ್ಯರು ಗ್ರಾಮೀಣ ಭಾಗದಲ್ಲಿ ವಿದ್ಯಾಸಂಸ್ಥೆ ಆರಂಭಿಸಿದ ಪರಿಣಾಮ ಬಡವರು, ಕೂಲಿಕಾರ್ಮಿಕರು, ರೈತರ ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಅದ್ಭುತ ಸಾಧನೆ ಮಾಡುತ್ತಿದ್ದಾರೆ. ಎಲ್ಲರೂ ಹಳ್ಳಿಗಳ ಕಡೆಗೆ ಮುಖ ಮಾಡುವಂತಾಗಿದೆ” ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತು ಸದಸ್ಯ ಅರವಿಂದ ಅರಳಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಜಾಬಶೆಟ್ಟೆ, ಕಲಬುರಗಿ ವಿಟಿಯುನ ನಿರ್ದೇಶಕ ಬಸವರಾಜ ಗಾದಗಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ನಿವೃತ್ತ ಎಂಜನಿಯರ್ ಸಿದ್ದಯ್ಯ ಕಾವಡಿಮಠ‌ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X