ಗದಗ | ಉದ್ಯೋಗ ಖಾತ್ರಿ ದಿನಕ್ಕೆ ₹ 370, ದುಡಿಯುವ ಕೈಗೆ ಕೆಲಸ: ಧರ್ಮರ ಕೃಷ್ಣಪ್ಪ

Date:

Advertisements

“ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ. ಉದ್ಯೋಗ ಖಾತ್ರಿ ದಿನಕ್ಕೆ ₹ 370 ರೂ. ದುಡಿಯುವ ಕೈಗೆ ಕೆಲಸ, ಅಂತರ್ಜಲ ಮಟ್ಟ ಹೆಚ್ಚಳಕೆ ಪೂರಕವಾಗಿದೆ” ಎಂದು ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಧರ್ಮರ ಕೃಷ್ಣಪ್ಪ ಹೇಳಿದರು.

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರ ಗ್ರಾಮದ ಹಳ್ಳ ಹೂಳೆತ್ತುವ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿ ಮಾತನಾಡಿದರು.

“ಕೆರೆ ಹೂಳೆತ್ತುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಾಗಲಿದೆ. ಕೊಳವೆ ಬಾವಿಗಳಲ್ಲಿ ನೀರಿನ ಏರಿಕೆ ಆಗಲಿದೆ. ಗ್ರಾಮಸ್ಥರು ತಮ್ಮ ಗ್ರಾಮದ ಕೆರೆಯ ಸಂರಕ್ಷಣೆಗೆ ಒತ್ತು ಕೊಡಬೇಕು” ಎಂದು ಸಲಹೆ ನೀಡಿದರು.

Advertisements

“ನರೇಗಾ ಯೋಜನೆಯು ಗ್ರಾಮೀಣ ಜನರ ಮಹತ್ವಾಕಾಂಕ್ಷೆ ಯೋಜನೆ ಇದಾಗಿದೆ. ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ನರೇಗಾ ಯೋಜನೆಯಲ್ಲಿ ಕೆಲಸ ಒದಗಿಸಿ ಸ್ವಾವಲಂಬಿಗಳಾಗಿ ಮಾಡುವಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಗ್ರಾಮೀಣ ಪ್ರದೇಶದ ಜನರು ಕೂಲಿ ಕೆಲಸಕ್ಕಾಗಿ ಪಟ್ಟಣಗಳಿಗೆ ಗುಳೆ ಹೋಗುವುದನ್ನು ತಪ್ಪಿಸಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಒದಗಿಸುವ ಕಾರ್ಯ ಮಾಡಲಾಗುತ್ತಿದೆ” ಎಂದು ಹೇಳಿದರು.

“ನರೇಗಾ ಯೋಜನೆ ಅಡಿಯಲ್ಲಿ ಬೇಸಿಗೆ ಅವಧಿಯಲ್ಲಿ 60 ದಿನಗಳ ಕಾಲ ಕೆಲಸ ಪಡೆದು ಗರಿಷ್ಠ 22,200 ರೂ. ಗಳಿಕೆ ಮಾಡಬಹುದು. ಇದರಿಂದ ರೈತರು ತಮ್ಮ ಕುಟುಂಬದ ಅಗತ್ಯಕ್ಕೆ ಬಳಕೆಗೆ ಅನುಕೂಲವಾಗಲಿದೆ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಗ್ರಾಮದ ಜನರು ಸ್ವಂತ ಊರಲ್ಲೇ ಕೂಲಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು 

ಈ ಸಂದರ್ಭದಲ್ಲಿ ದೊಡ್ಡೂರ ಗ್ರಾಪಂ ಅಧ್ಯಕ್ಷರಾದ ಚಂದ್ರಶೇಖರ ಈಳಗೇರ, ಗ್ರಾಪಂ ಸದಸ್ಯರಾದ ಮಲ್ಲೇಶ ಮಣ್ಣಮ್ಮನವರ, ಪ್ರಮುಖರಾದ ನಾನಪ್ಪ ಲಮಾಣಿ, ಗ್ರಾಪಂ ಕಾರ್ಯದರ್ಶಿ ಆರ್.ಕೆ. ಗುರುವಿನ, ಬಿಎಫ್ಟಿ ತೀರಕಪ್ಪ ಲಮಾಣಿ, ಮಲ್ಲಿಕಾರ್ಜುನ ತಳವಾರ ಇತರರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X