₹100 ಸನಿಹಕ್ಕೆ 1ಕೆಜಿ ಟೊಮೆಟೊ ದರ!

Date:

Advertisements
  • ಮಳೆಯ ಕೊರತೆಯಿಂದ ಮಾರುಕಟ್ಟೆಗೆ ತರಕಾರಿಗಳ ಪೂರೈಕೆ ಕಡಿಮೆ
  • ಮೊದಲ ಬಾರಿಗೆ ಕರ್ನಾಟಕ ರಾಜ್ಯದಿಂದ ಬಾಂಗ್ಲಾದೇಶಕ್ಕೆ ಟೊಮೆಟೊ ರಫ್ತು

ರಾಜ್ಯದಲ್ಲಿ ಮುಂಗಾರು ಈಗ ಚುರುಕಾಗಿದ್ದು, ಕೆಲವೆಡೆ ಜೋರು ಮಳೆಯಾಗುತ್ತಿದ್ದರೆ, ಇನ್ನೂ ಕೆಲವೆಡೆ ಮಳೆರಾಯನ ದರ್ಶನವಾಗಿಲ್ಲ. ಮಳೆಯ ಕೊರತೆಯಿಂದ ತರಕಾರಿಗಳು ಒಣಗಿದ್ದು, ಮಾರುಕಟ್ಟೆಗೆ ಸರಬರಾಜು ಕಡಿಮೆಯಾಗುತ್ತಿದೆ. ಜತೆಗೆ ರಾಜ್ಯದಲ್ಲಿ ಬೆಳೆದ ಟೊಮೆಟೊ ಪ್ರಥಮ ಬಾರಿಗೆ ಬಾಂಗ್ಲಾದೇಶಕ್ಕೆ ರಫ್ತಾಗುತ್ತಿದೆ. ಇದೆಲ್ಲದರ ನಡುವೆ, ಕೆ.ಜಿ ಟೊಮೆಟೊ ಬೆಲೆ ₹100ರ ಸನಿಹಕ್ಕೆ ಬಂದಿದೆ.

ಬೆಂಗಳೂರು ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ತರಕಾರಿಗಳ ಬೆಲೆ ಗಗನಕ್ಕೆ ಏರುತ್ತಿದೆ. 15 ಕೆಜಿ ಟೊಮೆಟೊ ಬಾಕ್ಸ್ ಸಾವಿರ ಸನಿಹಕ್ಕೆ ಬಂದಿದೆ. ಅಲ್ಲದೆ, ಮಾರುಕಟ್ಟೆಯಲ್ಲಿನ ತರಕಾರಿಗಳ ಬೆಲೆ ಹೆಚ್ಚಳವಾಗಿದ್ದು, ಗ್ರಾಹಕನ ಕೈ ಸುಡುವಂತಾಗಿದೆ.

ರಾಜ್ಯದ ಟೊಮೆಟೊ ಬಾಂಗ್ಲಾದೇಶಕ್ಕೆ ರಫ್ತು

Advertisements

ದೇಶದ ಇತರೆ ರಾಜ್ಯಗಳಲ್ಲಿ ಭಾರಿ ಮಳೆಯಾದ ಕಾರಣ ಮೊದಲ ಬಾರಿಗೆ ಕರ್ನಾಟಕ ರಾಜ್ಯದಿಂದ ಬಾಂಗ್ಲಾದೇಶಕ್ಕೆ ಟೊಮೆಟೊ ರಫ್ತಾಗುತ್ತಿದೆ. ಇದು ಕೂಡ ರಾಜ್ಯದಲ್ಲಿ ಟೊಮೆಟೊ ಬೆಲೆ ಏರಿಕೆಗೆ ಕಾರಣ ಎನ್ನಲಾಗುತ್ತಿದೆ.

ಹಾಗೆಯೇ, ಕೋಲಾರದಿಂದ ಹೊರರಾಜ್ಯಗಳಿಗೆ ಟೊಮೆಟೊ ರಫ್ತು ಹೆಚ್ಚಾಗುತ್ತಿದ್ದು, ಬೇರೆ ರಾಜ್ಯಗಳಲ್ಲಿ ಟೊಮೆಟೊಗೆ ಹೆಚ್ಚಿನ ಬೇಡಿಕೆ ಇದೆ.   

ಹೆಚ್ಚಳವಾದ ಟೊಮೆಟೊ ದರ

ಕಳೆದ ಒಂದು ವಾರದ ಹಿಂದೆ ಕಡಿಮೆ ಇದ್ದ ಟೊಮೆಟೊ ದರ ಇದೀಗ ₹100ರ ಸಮೀಪಿಸಿದೆ. ಭಾನುವಾರ ಟೊಮೆಟೊ ದರ ಕೆಜಿಗೆ ₹50 ರಿಂದ ₹60 ರೂಪಾಯಿ ಇತ್ತು. ಸೋಮವಾರ ಮಾರುಕಟ್ಟೆಯಲ್ಲಿ ಪ್ರತಿ ಕೆಜಿಗೆ ₹70-80 ಇದೆ.

ಇತ್ತೀಚೆಗೆ ಸುರಿದ ಮಳೆಯ ಹಿನ್ನೆಲೆಯಲ್ಲಿ ತರಕಾರಿ ಕೊಳೆತಿದ್ದು, ರಾಜಧಾನಿ ಬೆಂಗಳೂರಿನ ಕೆ.ಆರ್‌.ಮಾರ್ಕೆಟ್‌, ಯಶವಂತಪುರ, ಮಲ್ಲೇಶ್ವರ, ಜಯನಗರ ಮಾರುಕಟ್ಟೆಗಳಲ್ಲಿ ತರಕಾರಿಗಳ ಪೂರೈಕೆ ತೀರಾ ಕಡಿಮೆಯಾಗಿದೆ. ಟೊಮೆಟೊ ಸೇರಿದಂತೆ ಬದನೆಕಾಯಿ, ಬಟಾಣಿ ಹಾಗೂ ಮೆಣಸಿನಕಾಯಿ ದರ ದುಪ್ಪಟ್ಟಾಗಿದ್ದು, ಕಳೆದ ಒಂದು ವಾರದಲ್ಲಿ ತರಕಾರಿಗಳ ಬೆಲೆ ಹೆಚ್ಚಳವಾಗಿದೆ.  

ಈ ಸುದ್ದಿ ಓದಿದ್ದೀರಾ? ಪ್ರಯಾಣಿಕರ ಸುರಕ್ಷತಾ ನಿಯಮ ಅನುಸರಿಸದ ಬಿಎಂಟಿಸಿ ಬಸ್‌ ಸಿಬ್ಬಂದಿ: ಆರೋಪ

ಕಳೆದ ವಾರ ಕೆಜಿಗೆ ₹40 ಇದ್ದ ಬದನೆಕಾಯಿ ಹಾಗೂ ಮೆಣಸಿನಕಾಯಿ ದರ ಇದೀಗ ₹ 80 ತಲುಪಿದೆ. ಬಟಾಣಿ ಕೆಜಿಗೆ ₹100 ರಿಂದ ₹150 ಏರಿಕೆಯಾಗಿದೆ. ಬೀನ್ಸ್‌ ಹಾಗೂ ನುಗ್ಗೆಕಾಯಿ ₹100-120 ಇದೆ. ಲಿಂಬು, ಬೆಳ್ಳುಳ್ಳಿ, ಬೀಟ್‌ರೂಟ್, ಆಲೂಗಡ್ಡೆ, ಹಾಗಲಕಾಯಿ ಬೆಲೆ ₹5-10 ಹೆಚ್ಚಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X