ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಸಿಎಂ ಮನವಿ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಶುಕ್ರವಾರ ಕೇಂದ್ರ ನಾಗರಿಕ ವಿಮಾನ ಯಾನ ಖಾತೆ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕುರಿತು ಚರ್ಚೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಸರ್ಕಾರವು ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 240 ಎಕರೆ ಭೂ ಸ್ವಾಧೀನಕ್ಕೆ ತಗಲುವ 319.14 ಕೋಟಿಗಳ ಭೂ ಸ್ವಾಧೀನದ ವೆಚ್ಚವನ್ನು ಭರಿಸಿದ್ದು, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ವಿಸ್ತರಣೆಯ ಅಂದಾಜು ವೆಚ್ಚ 101.84 ಕೋಟಿಗಳ ಯುಟಿಲಿಟಿ ಸ್ಥಳಾಂತರದ ಯೋಜನೆಯನ್ನು ರೂಪಿಸಿ ಶ್ರೀಘ್ರವಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕೆಂದು ಸಿಎಂ ಕೋರಿದ್ದಾರೆ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (v) ಪ್ರಕಾರ ಕಾರ್ಯನಿಯೋಜಕರು ವಿಮಾನ ನಿಲ್ದಾಣದ ವಿಸ್ತರಣೆಗಾಗಿ ಅಗತ್ಯ ವಿರುವ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಯಾವುದೇ ಋಣಭಾರವಿಲ್ಲದೆ ನಿಯೋಜಿತರಿಗೆ ಉಚಿತವಾಗಿ ವರ್ಗಾಯಿಸಬೇಕು. ಅದರಂತೆ, ಅಗತ್ಯವಿರುವ ಭೂಮಿಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಉಚಿತವಾಗಿ ವರ್ಗಾಯಿಸಲಾಗಿದೆ. ಒಪ್ಪಂದದ ಷರತ್ತು ಬಿ 2 (VI) ಪ್ರಕಾರ, ನಿಯೋಜಿತರು ಮೈಸೂರು ವಿಮಾನ ನಿಲ್ದಾಣದ ಹೆಚ್ಚಿನ ಅಭಿವೃದ್ಧಿಯ ಬಂಡವಾಳ ವೆಚ್ಚ, ಮಾರ್ಪಾಡುಗಳು, ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಎಲ್ಲಾ ವೆಚ್ಚಗಳನ್ನು ಭರಿಸಬೇಕು. ಅದರಂತೆ, ಮೈಸೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಅಗತ್ಯವಿರುವ ಬಂಡವಾಳ ಹಾಗೂ ಇನ್ನಿತರೆ ವೆಚ್ಚಗಳನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವೇ ಭರಿಸಬೇಕಿದೆ. ಈ ಹಿನ್ನೆಲೆಯಲ್ಲಿ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯವಿರುವ 240 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರವು 319.14 ಕೋಟಿಗಳ ಅನುದಾನವನ್ನು ಬಿಡುಗಡೆ ಮಾಡಿದೆ. ಭೂ ಸ್ವಾಧೀನ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ ಎಂದು ವಿವರಿಸಿದ್ದಾರೆ.

Advertisements

ನವೆಂಬರ್ 2024 ರಲ್ಲಿ ಕಾವೇರಿ ನೀರಾವರಿ ನಿಗಮ ನಿಯಮಿತವು(ಸಿ. ಎನ್.ಎನ್.ಎಲ್) ವಿಮಾನ ನಿಲ್ದಾಣ ವಿಸ್ತರಣೆ ಪ್ರದೇಶದಲ್ಲಿ ಎರಡು ಕಂದಕಗಳ ಮತ್ತು 7 ಕಾಲುವೆಗಳ ಸ್ಥಳಾಂತರಕ್ಕೆ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ 70 ಕೋಟಿಗಳ ವೆಚ್ಚವಾಗಲಿದೆ. ಅಂತೆಯೇ, ಕೆ. ಪಿ.ಟಿ.ಸಿಎಲ್ ಕೂಡ ಹೈ-ಟೆನ್ಷನ್ ಲೈನ್ ಗಳ ಮತ್ತು ಚೆಸ್ಕಾಂ ಲೋ ಟೆನ್ಶನ್ ವೈರ್ ಗಳ ಮಾರ್ಗ ಬದಲಾವಣೆಗೆ 31.82 ಕೋಟಿಗಳ ಅಂದಾಜು ವೆಚ್ಚವಾಗಲಿದೆ ಎಂದು ತಿಳಿಸಿದ್ದು, ಒಟ್ಟಾರೆ ಸದರಿ ಕಾಮಗಾರಿಗೆ 101.82 ಕೋಟಿಗಳ ಅನುದಾನದ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳು ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X