ವಕ್ಫ್ ಬೋರ್ಡ್‌ ಜೊತೆ ಭೂ ವಿವಾದ ಹೊಂದಿದ್ದ 50 ಮಂದಿ ಬಿಜೆಪಿಗೆ ಸೇರ್ಪಡೆ

Date:

Advertisements

ಸಂಸತ್ತಿನ ಉಭಯ ಸದನಗಳಲ್ಲಿ ‘ವಕ್ಫ್ ತಿದ್ದುಪಡಿ ಮಸೂದೆ-2024’ ಅಂಗೀಕಾರಗೊಂಡ ಕೆಲವೇ ಗಂಟೆಗಳಲ್ಲಿ ಕೇರಳದಲ್ಲಿ ಸುಮಾರು 50 ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರೆಲ್ಲರೂ ವಕ್ಫ್‌ ಬೋರ್ಡ್‌ ಜೊತೆಗಿನ ಭೂ ವಿವಾದದಲ್ಲಿ ಸಿಲುಕಿಕೊಂಡಿರುವವರು ಎಂದು ವರದಿಯಾಗಿದೆ.

ಕೇರಳದ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರ ಸಮ್ಮುಖದಲ್ಲಿ ಹಲವರು ಬಿಜೆಪಿ ಸೇರಿದ್ದಾರೆ. ‘ಈ ಎಲ್ಲರೂ ತಮ್ಮದು ಎಂದು ವಾದಿಸುತ್ತಿರುವ ಭೂಮಿಯನ್ನು ವಕ್ಫ್‌ ಬೋರ್ಡ್‌ನಿಂದ ಪಡೆದುಕೊಳ್ಳಲು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ನೆರವು ನೀಡಲಿದೆ’ ಎಂದು ಬಿಜೆಪಿ ನಾಯಕರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯವಾಗಿ ಕೇರಳದ ಕೊಚ್ಚಿಯಲ್ಲಿರುವ ಮುನಂಬಮ್‌ ಪ್ರದೇಶದ ಹಲವಾರು ನಿವಾಸಿಗಳು ಬಿಜೆಪಿ ಸೇರಿದ್ದಾರೆ. ಅವರೆಲ್ಲರೂ ವಕ್ಫ್‌ ಮಂಡಳಿಯ ಸುಪರ್ದಿಯಲ್ಲಿರುವ ಭೂಮಿಯ ಮೇಲೆ ತಮ್ಮ ಆಸ್ತಿ ಹಕ್ಕು ಪಡೆಯಲು ಕಳೆದ ಆರು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆಗೆ ಕ್ಯಾಥೋಲಿಕ್ ಚರ್ಚ್‌ ಬೆಂಬಲವಾಗಿ ನಿಂತಿದೆ ಎಂದು ವರದಿಯಾಗಿದೆ.

Advertisements

ಇದೀಗ, ವಕ್ಫ್‌ ತಿದ್ದುಪಡಿ ಮಸೂದೆ ಅಂಗೀಕಾರವಾಗಿರುವುದರಿಂದ, ತಿದ್ದುಪಡಿ ಕಾಯ್ದೆ ಜಾರಿಗೆ ಬಂದರೆ, ವಕ್ಫ್‌ ಮಂಡಳಿ ಹಕ್ಕು ಹೊಂದಿರುವ ತಮ್ಮ ಭೂಮಿಯ ವಿವಾದ ಇತ್ಯರ್ಥವಾಗುತ್ತದೆ. ತಮ್ಮ ಭೂಮಿ ತಮಗೆ ಮರಳಿ ದೊರೆಯುತ್ತಿದೆ ಎಂದು ನಂಬಿದ್ದಾರೆ.

“ವಕ್ಫ್‌ ಮಂಡಳಿ ಜೊತೆಗೆ ಭೂ ವಿವಾದ ಹೊಂದಿರುವವರ ಅಳಲು ಆಲಿಸುವಲ್ಲಿ ಕೇರಳದ ಚುನಾಯಿತ ಸರ್ಕಾರ ನಿರ್ಲಕ್ಷ್ಯ ಧೋರಣೆ ಹೊಂದಿದೆ. ಈ ಸಂತ್ರಸ್ತರ ಸಮಸ್ಯೆ ಪರಿಹರಿಸಿ, ಉತ್ತಮ ಭವಿಷ್ಯ ಒದಗಿಸಲು ಕೆಲವ ಮಾಡುವ ಅವಕಾಶ ನಮಗೆ ದೊರೆತಿದೆ” ಎಂದು ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಹೇಳಿದ್ದಾರೆ. ಉತ್ತಮ ಭವಿಷ್ಯಕ್ಕಾಗಿ ಕೆಲಸ ಮಾಡುವ ಅವಕಾಶ ನಮಗೆ ಸಿಕ್ಕಿದೆ. ನಾವು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ ಎಂದೂ ಅವರು ಭರವಸೆ ನೀಡಿದ್ದಾರೆ.

“ವಕ್ಫ್ ಮಸೂದೆ ಅಂಗೀಕಾರ ಆಗಿರುವುದರಿಂದ ಮುನಂಬಮ್ ಜನರ ಸಮಸ್ಯೆಗೆ ಪರಿಹಾರ ದೊರೆಯುವುದೇ. ಅವರ ಸಮಸ್ಯೆಯನ್ನು ಬಗೆಹರಿಸಿ, ಪರಿಹಾರ ಒದಗಿಸುತ್ತೇವೆಂದು ಬಿಜೆಪಿ ಯಾವೊಬ್ಬ ನಾಯಕರೂ ಹೇಳಿಲ್ಲ” ಎಂದು ವಿಪಕ್ಷ ನಾಯಕ ವಿ.ಡಿ. ಸತೀಶನ್ ಪ್ರಶ್ನಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X