ಸುವರ್ಣಸೌಧದ ಬಳಿ 2ಎ ಮೀಸಲಾತಿಗಾಗಿ ಪ್ರತಿಭಟನೆ ನಡೆಸುವಾಗ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ನಡೆದ ಪ್ರಕರಣದ ನ್ಯಾಯಾಂಗ ತನಿಖೆಗೆ ಧಾರವಾಡ ಹೈಕೋರ್ಟ್ ಪೀಠ ಆದೇಶಿಸಿದೆ.
ಪ್ರತಿಭಟನೆ ನಡೆಸುವಾಗ ಲಾಠಿ ಚಾರ್ಜ್ ಮಾಡಿದ ವಿಚಾರದಲ್ಲಿ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಬಸವ ಜಯಮೃತ್ಯುಂಜಯ ಸ್ವಾಮಿ, ಮತ್ತಿತರರು ರಿಟ್ ಅರ್ಜಿ ಸಲ್ಲಿಸಿದ್ದರು.
ಇದನ್ನು ಓದಿದ್ದೀರಾ? ಹಿಂಸೆಗೆ ತಿರುಗಿದ ಪಂಚಮಸಾಲಿ ಹೋರಾಟ; ಪೊಲೀಸರ ಮೇಲೆ ಕಲ್ಲುತೂರಾಟ, ಲಾಠಿಪ್ರಹಾರ
ಈ ಅರ್ಜಿ ವಿಚಾರಣೆ ನಡೆಸಿದ ಪೀಠವು ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚಿಸಿದೆ. ಕಾಲಮಿತಿಯಲ್ಲಿ ವರದಿ ನೀಡುವಂತೆಯೂ ಆದೇಶಿಸಿದೆ.
ಪಂಚಮಸಾಲಿ ಹೋರಾಟಗಾರರ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದಿಸಿದರು. ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟಿಸುವಾಗ ಪೊಲೀಸರು ದುರುದ್ದೇಶದಿಂದ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಆರೋಪಿಸಿದರು.
