ಹಂಪಿ | ದೇಶದ ಮೂವರು ಸಾಧಕರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಿರುವುದು ಸಂತೋಷವಾಗಿದೆ: ಥಾವರ್ ಚಂದ್ ಗೆಹ್ಲೋಟ್

Date:

Advertisements

ಹಂಪಿ ತನ್ನ ಐತಿಹಾಸಿಕ ಪರಂಪರೆಗೆ ಹೆಸರುವಾಸಿಯಾಗಿದ್ದರೂ, ಹಂಪಿಯ ಪರಿಸರದಲ್ಲಿ ಸ್ಥಾಪಿಸಲಾದ ಕನ್ನಡ ವಿಶ್ವವಿದ್ಯಾಲಯವು ದೇಸಿ ಮಾದರಿಯ ಸಂಶೋಧನೆಗೆ ವಿಶಿಷ್ಟವಾಗಿದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟರು.

ವಿಜಯನಗರ ಜಿಲ್ಲೆಯ ಹಂಪಿ ಕನ್ನಡ ವಿಶ್ವವಿದ್ಯಾಲಯದ 33ನೇ ನುಡಿಹಬ್ಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶರಾದ ಜಸ್ಟೀಸ್ ಶಿವರಾಜ್ ವಿ ಪಾಟೀಲ್, ಪ್ರಖ್ಯಾತ ಬರಹಗಾರರು ಮತ್ತು ಚಿಂತಕರಾದ ಕುಂ ವೀರಭದ್ರಪ್ಪ(ಕುಂ.ವೀ) ಹಾಗೂ ಪ್ರಖ್ಯಾತ ಹಿಂದೂಸ್ತಾನಿ ಗಾಯಕರಾದ ಪದ್ಮಶ್ರೀ ಎಂ ವೆಂಕಟೇಶ್ ಕುಮಾರ್ ಅವರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಿ ಮಾತನಾಡಿದರು.

“ಹಂಪಿಯ ಐತಿಹಾಸಿಕ ಪರಿಸರದಲ್ಲಿ ದೇಶದ ಮೂವರು ಸಾಧಕರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡುವುದು ನನಗೆ ತುಂಬಾ ಸಂತೋಷವಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಮತ್ತು ಇತಿಹಾಸದ ಸಂಶೋಧನೆಯನ್ನು ತನ್ನ ಮೂಲ ಉದ್ದೇಶವಾಗಿ ಹೊಂದಿರುವ ಕನ್ನಡ ವಿಶ್ವವಿದ್ಯಾಲಯವು ಒಟ್ಟು 19 ಅಧ್ಯಯನ ವಿಭಾಗಗಳು, ವಿಸ್ತರಣಾ ಕೇಂದ್ರ ಮತ್ತು ವಿವಿಧ ಅಧ್ಯಯನ ಪೀಠಗಳ ಮೂಲಕ ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುತ್ತಿದ್ದು, ಭಾಷಾ ವಿಭಾಗ, ಸಾಮಾಜಿಕ ವಿಜ್ಞಾನಗಳ ವಿಭಾಗ, ಲಲಿತಕಲೆಗಳ ವಿಭಾಗ ಮತ್ತು ವಿಜ್ಞಾನಗಳ ಬೋಧಕವರ್ಗಗಳನ್ನು ಹೊಂದಿದೆ. ಕನ್ನಡ ವಿಶ್ವವಿದ್ಯಾಲಯದ ಸ್ಥಾಪಕ ಕುಲಪತಿ ಡಾ. ಚಂದ್ರಶೇಖರ ಕಂಬಾರರು ವಿಶ್ವವಿದ್ಯಾಲಯದ ಉತ್ತಮ ಶೈಕ್ಷಣಿಕ ಚಟುವಟಿಕೆಗಳಿಗೆ ಭದ್ರ ಬುನಾದಿ ಹಾಕಿದ್ದಾರೆ. ವಿಶ್ವವಿದ್ಯಾಲಯದ ಹಸ್ತಪ್ರತಿ ಭಂಡಾರವು ಸುಮಾರು ಐದು ಸಾವಿರ ಅಪರೂಪದ ಹಸ್ತಪ್ರತಿಗಳು, ದೃಶ್ಯಕಲಾ ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ರಚಿಸಿ, ಪ್ರದರ್ಶಿಸಿದ ಕಲಾಕೃತಿಗಳು ಸೇರಿದಂತೆ ಹಲವು ಸಂಗ್ರಹಗಳನ್ನು ಹೊಂದಿರುವುದು ಬಹಳ ಹೆಮ್ಮೆಯ ವಿಷಯವಾಗಿದೆ” ಎಂದು ಹೇಳಿದರು.

Advertisements

“ಹಂಪಿ ವಾಸ್ತುಶಿಲ್ಪ ಮತ್ತು ಶಿಲ್ಪಕಲೆಯ ಮಾದರಿಯಲ್ಲಿ ನಿರ್ಮಿಸಲಾದ ವಿಶ್ವವಿದ್ಯಾಲಯದ ಅನೇಕ ಕಟ್ಟಡಗಳು ಇತಿಹಾಸವನ್ನು ನೆನಪಿಸುತ್ತವೆ. ದೇಶದ ಶಿಲ್ಪಕಲಾ ವೈಭವವನ್ನು ಮರುಸೃಷ್ಟಿಸುವ ಶಿಲ್ಪಕಲೆ, ಗಿರಿಸೀಮೆ ಆವರಣ, ಬುಡಕಟ್ಟು ಸಂಸ್ಕೃತಿಯನ್ನು ಚಿತ್ರಿಸುತ್ತದೆ. ವಿಶ್ವವಿದ್ಯಾಲಯದ ವಸ್ತುಸಂಗ್ರಹಾಲಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕಾಗಿದೆ” ಎಂದರು.

“ಸಾಂಪ್ರದಾಯಿಕ ವಿಶ್ವವಿದ್ಯಾಲಯದ ಘಟಿಕೋತ್ಸವಗಳಿಗಿಂತ ಭಿನ್ನವಾಗಿ, ಕನ್ನಡ ವಿಶ್ವವಿದ್ಯಾಲಯದ ‘ನುಡಿಹಬ್ಬ’ ನಮ್ಮ ದೇಸಿ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ. ಇದು ನುಡಿಹಬ್ಬಾದ ವಿಶಿಷ್ಟ ಸಂಪ್ರದಾಯ. ಇಲ್ಲಿ ಅವರನ್ನು ಬಿಳಿ ಉಡುಗೆಯಲ್ಲಿ ಸಂಗೀತ ವಾದ್ಯಗಳೊಂದಿಗೆ ವೇದಿಕೆಗೆ ಮೆರವಣಿಗೆ ಮಾಡುವುದು ನಿಜವಾಗಿಯೂ ನನಗೆ ಮರೆಯಲಾಗದ ಅನುಭವವಾಗಿದೆ. ಈ ವಿಶಿಷ್ಟ ಕ್ಷಣವನ್ನು ಸೃಷ್ಟಿಸಿದ ಮತ್ತು ಪೋಷಿಸಿದ ಎಲ್ಲರಿಗೂ ಅಭಿನಂದನೆಗಳು” ಎಂದು ಶುಭ ಹಾರೈಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಶೈಕ್ಷಣಿಕ ಹರಿಕಾರ ಟಿ.ವಿ. ವಸಂತರಾಜ ಅರಸ್ ನೆನಪಿನಾರ್ಥ ನುಡಿ ನಮನ

ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವದಲ್ಲಿ ನಾಡೋಜ ಗೌರವ ಪದವಿ ಪಡೆದ ಸಾಧಕರಿಗೆ, ವಿವಿಧ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಪದವೀಧರರಿಗೆ ಹೃತ್ಪೂರ್ವಕ ಅಭಿನಂದನೆ ತಿಳಿಸಿಸದರು.

ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್, ತುಮಕೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ರಾಜಾಸಾಬ್ ಎಂ ಎಚ್, ಹಂಪಿ ವಿವಿ ಕುಲಪತಿ ಡಾ. ಡಿ ವಿ ಪರಶಿವಮೂರ್ತಿ ಸೇರಿದಂತೆ ಇತರ ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X