ವ್ಯಕ್ತಿಯೊಬ್ಬರನ್ನು ಚಾಕುನಿಂದ ಇರಿದು ಕೊಲೆ ಮಾಡಿರುವ ಘಟನೆ ಬೀದರ್ ಹೊರವಲಯದ ಅಲಿಯಾಬಾದ್ ರಿಂಗ್ ರೋಡ್ ಸಮೀಪದ ಎಸ್‌ಕೆ ಧಾಬಾ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಬೀದರ್ ತಾಲ್ಲೂಕಿನ ಹೊನ್ನಿಕೇರಿ ಗ್ರಾಮದ ವೈಜಿನಾಥ ದತ್ತಾತ್ರಿ ಪಾಟೀಲ್ (50) ಎಂದು ತಿಳಿದು ಬಂದಿದೆ.
ಅಪರಿಚಿತರು ವೈಜಿನಾಥ ಅವರಿಗೆ ಚಾಕುವಿನಿಂದ ತಲೆ ಮತ್ತು ಹೊಟ್ಟೆ ಭಾಗದಲ್ಲಿ ಹೊಡೆದು ಕೊಲೆಗೈದು ಪರಾರಿಯಾಗಿದ್ದಾರೆ. ಸದ್ಯ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬ್ರಿಮ್ಸ್ ಕಳುಹಿಸಲಾಗಿದೆ. ಈ ಸಂಬಂಧ ನೂತನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದು, ತನಿಖೆ ಮುಂದುವರೆದಿದೆ.