ದಾವಣಗೆರೆ | ಮಾದಕವಸ್ತು ಬಳಕೆ, ಮಾರಾಟಕ್ಕೆ ಕಡಿವಾಣ ಹಾಕಿ; ತಂಜೀಮ್ ಉಲ್ ಮುಸ್ಲಿಮೀನ್

Date:

Advertisements

ಮಾದಕ ವಸ್ತುಗಳು ಅಪ್ರಾಪ್ತರು, ಯುವಕರ ಕೈಗೆ ಸುಲಭವಾಗಿ ಸಿಗುತ್ತಿದ್ದು, ಸೇವಿಸಿದವರು ಕೊಲೆ, ದರೋಡೆ ಮಾಡುವುದು, ಜನರಿಗೆ ತೊಂದರೆ ನೀಡುವುದನ್ನು ಮಾಡುತ್ತಿದ್ದು, ಅಂತಹ ಮಾದಕ ವಸ್ತು ಸಾಗಾಟ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಾನೂನಾತ್ಮಕ ಕಠಿಣ ಕ್ರಮ ಕೈಗೊಳ್ಳುವಂತೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾ. ನಲ್ಲೂರು ಗ್ರಾಮದ ತಂಜೀಮ್ ಉಲ್ ಮುಸ್ಲಿಮೀನ್ ಸಮಿತಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ದಾವಣಗೆರೆ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ರನ್ನು ಭೇಟಿ ಮಾಡಿದ ನಲ್ಲೂರು ಗ್ರಾಮದ ತಂಜೀಮ್ ಉಲ್ ಮುಸ್ಲಿಮೀನ್ ಸಮಿತಿ ಪದಾಧಿಕಾರಿಗಳು, ಸಮಾಜದ ಮುಖಂಡರು, ನಲ್ಲೂರು ಭಾಗದಲ್ಲಿ ಮಾದಕ ವಸ್ತುಗಳ ಹಾವಳಿ, ಅಪಾಯ, ಅನಾಹುತಗಳನ್ನು ತಡೆಯುವಂತೆ ಮನವಿ ಸಲ್ಲಿಸಿದರು.

1001784570
ತಂಜೀಮ್ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡುತ್ತಿರುವುದು

ಮನವಿ ಸಲ್ಲಿಸಿ ಮಾತನಾಡಿದ ಸಮಿತಿ ಕಾರ್ಯದರ್ಶಿ ಅಫ್ರೋಜ್ ಬೇಗ್, “ಚನ್ನಗಿರಿ ಪಟ್ಟಣ ಹಾಗೂ ನಲ್ಲೂರು ಗ್ರಾಮಗಳ ಭಾಗದಲ್ಲಿ ದಿನದಿನಕ್ಕೂ ಮಾದಕ ವ್ಯಸನಿಗಳ ಹಾವಳಿ ಹೆಚ್ಚುತ್ತಿದೆ. ಅಪ್ರಾಪ್ತ ಮಕ್ಕಳು, ಯುವಕರು ಮಾದಕ ವಸ್ತುಗಳನ್ನು ಬಳಸಿಕೊಂಡು, ಕೊಲೆ, ದರೋಡೆ, ಸುಲಿಗೆ, ಜನ ಸಾಮಾನ್ಯರಿಗೆ ತುಂಬಾ ತೊಂದರೆ ನೀಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

Advertisements

“ನಲ್ಲೂರಿನಲ್ಲಿ ಏಪ್ರಿಲ್.2ರಂದು ಮಾದಕ ವಸ್ತುಗಳನ್ನು ಉಪಯೋಗಿಸಿ, ಅಮಾಯಕ ಯುವಕ ಮೊಹಮ್ಮದ್ ಜಾವಿದ್‌ನನ್ನು ಕೊಲೆ ಮಾಡಲಾಗಿದೆ. ಹತ್ಯೆ ಮಾಡಿದ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು, ಮಾದಕ ವಸ್ತುಗಳನ್ನು ಸೇವಿಸಿ, ಕೊಲೆ ಮಾಡಿರುವುದಾಗಿ ಪೊಲೀಸರ ಸಮಕ್ಷಮ ಒಪ್ಪಿಕೊಂಡಿದ್ದಾರೆ. ಇಂತಹ ಘಟನೆಯಿಂದಾಗಿ ಗ್ರಾಮಸ್ಥರು ತೀವ್ರ ಭಯದಲ್ಲೇ ದಿನ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಆಪಾದಿಸಿದರು.

1001784569
ಜಿಲ್ಲಾಡಳಿತ ಭವನದ ಮುಂಬಾಗದಲ್ಲಿ

“ಚನ್ನಗಿರಿ ಪಟ್ಟಣ, ನಲ್ಲೂರು ಗ್ರಾಮ ಸೇರಿದಂತೆ ಇಡೀ ತಾಲೂಕಿನಲ್ಲಿ ಯಾರೇ ಮಾದಕ ವಸ್ತುಗಳನ್ನು ಬಳಸುವವರು, ಸಾಗಾಟ ಮಾಡುವವರು, ಪೂರೈಸುವವರು, ಮಾರಾಟ ಮಾಡುವವರು ಯಾರೇ ಆಗಿದ್ದರೂ ಅಂತಹವರನ್ನು ಪತ್ತೆ ಮಾಡಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮಾದಕ ವಸ್ತುಗಳನ್ನು ಸೇವಿಸಿ, ಮೈಮೇಲೆ ಪ್ರಜ್ಞೆ ಇಲ್ಲದವರಂತೆ ಅಪರಾಧ ಕೃತ್ಯಗಳನ್ನು ಎಸಗುವ ದುಷ್ಕರ್ಮಿಗಳನ್ನು ಮಟ್ಟ ಹಾಕಬೇಕು” ಎಂದು ಒತ್ತಾಯಿಸಿದರು.

“ದಿನದಿಂದ ದಿನಕ್ಕೆ ನಲ್ಲೂರು, ಚನ್ನಗಿರಿ ತಾಲೂಕಿನಲ್ಲಿ ಮತ್ತೇರಿಸುವ ಪದಾರ್ಥಗಳು, ಮಾದಕ ವಸ್ತುಗಳನ್ನು ಬಳಸಿ, ನಶೆಗೆ ವಿದ್ಯಾರ್ಥಿ, ಯುವ ಜನರು, ಅಪ್ರಾಪ್ತ ಮಕ್ಕಳು ತಮ್ಮ ಬದುಕು, ಆರೋಗ್ಯ, ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ನಲ್ಲೂರು ಗ್ರಾಮದ ಯುವ ಮೊಹಮ್ಮದ್ ಜಾವೀದ್ ಹತ್ಯೆಯೂ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದ ದುಷ್ಕರ್ಮಿಗಳಿಂದಲೇ ಆಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮಾದಕ ವಸ್ತುಗಳ ನಿರ್ಮೂಲನೆ, ಅದರ ಮಾರಾಟ , ಸಾಗಾಣಿಕೆ ವಿರುದ್ಧ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಂವಿಧಾನಿಕ ಹಕ್ಕುಗಳ ರಕ್ಷಣೆಗಾಗಿ ವಕ್ಫ್ ತಿದ್ದುಪಡಿ ವಿರುದ್ಧ ಮುಸ್ಲಿಂ ಒಕ್ಕೂಟ ಪ್ರತಿಭಟನೆ.

ತಂಜೀಮ್ ಉಲ್ ಮುಸ್ಲಿಮೀನ್ ಸಮಿತಿ ಪದಾಧಿಕಾರಿಗಳು, ಮುಸ್ಲಿಂ ಸಮಾಜದ ಮುಖಂಡರಾದ ಖಾಜಿ ತಬ್ರೇಜ್, ಯೂತ್ ಕಾಂಗ್ರೆಸ್ ಚನ್ನಗಿರಿ ಬ್ಲಾಕ್ ಅಧ್ಯಕ್ಷರಾದ ವಾಸಿಂ ಅಹಮದ್, ರಹಮತ್ತುಲ್ಲಾ, ಅಸ್ಲಂ ಶಾಮಿಯಾನ, ಜಬೀವುಲ್ಲಾ, ಫಯಾಜ್ ಅಹಮ್ಮದ್, ಸಲ್ಮಾನ್ , ಶೋಯಿಬ್, ರಫೀಕ್  ಸೇರಿದಂತೆ ನಲ್ಲೂರು ಗ್ರಾಮಸ್ಥರು, ವಿದ್ಯಾರ್ಥಿ, ಯುವ ಜನರು ಇದ್ದರು

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X