ವಕ್ಫ್ ಮಸೂದೆ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂವಿಧಾನಬಾಹಿರವೆಂದು ಘೋಷಿಸುವಂತೆ ಎಎಪಿ ಶಾಸಕರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
ವಕ್ಫ್ ಮಸೂದೆಯು ಮೂಲಭೂತ ಹಕ್ಕು7ಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ 14, 15, 21, 25, 26, 29, 30 ಮತ್ತು 300-A ವಿಧಿಯನ್ನು ಉಲ್ಲಂಘಿಸುವುದಾಗಿಯೂ ಅಮಾನತುಲ್ಲಾ ಖಾನ್ ಉಲ್ಲೇಖಿಸಿದ್ದಾರೆ.
ಇದನ್ನು ಓದಿದ್ದೀರಾ? ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾದ ಕಾಂಗ್ರೆಸ್
ಇದು ಮುಸ್ಲಿಮರ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾಯತ್ತತೆಯನ್ನು ಮೊಟಕುಗೊಳಿಸುತ್ತದೆ. ಕಾರ್ಯಾಂಗದ ಹಸ್ತಕ್ಷೇಪಕ್ಕೆ ಅನುವು ಮಾಡಿಕೊಡುತ್ತದೆ. ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳನ್ನು ನಿರ್ವಹಿಸುವ ಅಲ್ಪಸಂಖ್ಯಾತರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ ಎಂದು ಖಾನ್ ಹೇಳಿದ್ದಾರೆ.
12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆ ಮತ್ತು ರಾಜ್ಯಸಭೆ ಎರಡೂ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದವು. ನಿರೀಕ್ಷೆಯಂತೆ 288 ಮತಗಳು ಮಸೂದೆ ಪರವಾಗಿ, 232 ಮತಗಳು ಮಸೂದೆ ವಿರುದ್ಧವಾಗಿ ಚಲಾವಣೆಯಾದವು. ರಾಜ್ಯಸಭೆಯಲ್ಲಿ, ಮಸೂದೆ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು. ಈ ಮಸೂದೆಗೆ ರಾಷ್ಟ್ರಪತಿ ಸಹಿ ಹಾಕಬೇಕಿದೆ.
ಇದಾದ ಬೆನ್ನಲ್ಲೇ ಹಲವು ನಾಯಕರು ವಕ್ಫ್ ಮಸೂದೆ ವಿರುದ್ಧವಾಗಿ ಕೋರ್ಟ್ ಕದ ತಟ್ಟಿದ್ದಾರೆ ಮತ್ತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಈಗಾಗಲೇ ಅಪೆಕ್ಸ್ ಕೋರ್ಟ್‌ಗೆ ವಕ್ಫ್ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದಾಗಿ ಜೈರಾಮ್ ರಮೇಶ್ ಅವರು ಇತ್ತೀಚೆಗೆ ತಿಳಿಸಿದ್ದಾರೆ. ತಮಿಳುನಾಡಿನ ಮದುರೈನಲ್ಲಿ ನಡೆಯುತ್ತಿರುವ ಭಾರತೀಯ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ಅಖಿಲ ಭಾರತ ಮಹಾ ಅಧಿವೇಶನದಲ್ಲಿ ವಕ್ಫ್ ಮಸೂದೆ ವಿರುದ್ಧವಾಗಿ ನಿರ್ಣಯ ಅಂಗೀಕರಿಸಲಾಗಿದೆ.
