ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಮತ್ತು ಸರ್ಕಾರಿ ಕಲಾ ಕಾಲೇಜ್ ಸಂಯುಕ್ತಾಶ್ರಯದಲ್ಲಿ ಪದವಿ ಹಂತದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ “ಅರಿವು” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ಸಮಾಲೋಚಕ ಹಾಗೂ ಸಂಪನ್ಮೂಲ ವ್ಯಕ್ತಿ ಹರ್ಷವರ್ಧನ,” ಯುವಕರು ನಾನಾ ಬಗೆಯ ದುಶ್ಚಟಗಳಿಗೆ ಬಲಿಯಾಗದೆ, ದುಶ್ಚಟಗಳಿಂದ ದೂರವಿದ್ದು, ಗುರಿಯ ಕಡೆಗೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಯುವಕರು ತಮ್ಮ ತಮ್ಮ ಭಾವನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬೇಕು. ಮಾನಸಿಕವಾಗಿ ದೈಹಿಕವಾಗಿ ಹಾಗೂ ಸದೃಢವಾಗಿರಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿ ಹಾಗೂ ನಿಮ್ಹಾನ್ಸ್ ತಾಂತ್ರಿಕ ವರ್ಗದ ನಾಗರಾಜ್,ವಿದ್ಯಾರ್ಥಿಗಳಿಗೆ ಸರ್ಕಾರಿ ಸೌಲಭ್ಯಗಳ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿ “ಯುವಕರಿಗೆ ಇರುವ ಸೌಲಭ್ಯ ಬಳಸಿಕೊಳ್ಳಿ ಹಾಗೂ ಮಾನಸಿಕವಾಗಿ ಹೆಚ್ಚು ಕ್ರಿಯಾಶೀಲರಾಗಿ ದೃಢವಾಗಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಕಲಾ ಕಾಲೇಜಿನ ಪ್ರಾಂಶುಪಾಲ ಬಿ.ಟಿ. ತಿಪ್ಪೇರುದ್ರಸ್ವಾಮಿ ಮಾತನಾಡಿ “ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವಜನರಿಗೆ ತುಂಬಾ ಉತ್ತಮವಾದ ಕಾರ್ಯಕ್ರಮಗಳನ್ನು ರೂಪಿಸಿವೆ, ಮಹತ್ತರವಾದ ಯೋಜನೆಗಳಿವೆ. ಅವುಗಳನ್ನು ನಾವೆಲ್ಲಾ ಸಮರ್ಥವಾಗಿ ಬಳಸಿಕೊಳ್ಳಬೇಕು ಹಾಗೂ ಇಂತಹ ಕಾರ್ಯಕ್ರಮಗಳು ಯುವಕರ ಮೇಲೆ ಹೆಚ್ಚು ಪ್ರಭಾವ ಬೀರಿ ಬದಲಾವಣೆಗಳೊಂದಿಗೆ ಯುವ ಜನರು ಗುರಿಯತ್ತ ಸಾಗಲು ಸಹಕಾರಿಯಾಗಿದೆ. ಹಾಗೂ ನಮ್ಮ ಕಾಲೇಜಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಬೆಸ್ಕಾಂ ನೌಕರರಿಗೆ ಎಚ್ಚರಿಕೆ ಗಂಟೆ, ನಿರ್ಲಕ್ಷ್ಯದ ಅವಘಡಕ್ಕೆ ಜೈಲು ಶಿಕ್ಷೆ.
ಕಾರ್ಯಕ್ರಮದಲ್ಲಿ ಉಪನ್ಯಾಸಕರು ಹಾಗೂ ಎನ್ ಎಸ್ ಎಸ್ ಅಧಿಕಾರಿಗಳಾದ ಬಸವರಾಜ್ ಹಾಗೂ ನಿಮ್ಹಾನ್ಸ್ ತಾಂತ್ರಿಕ ವರ್ಗದ ಕುಮಾರಿ ಅನು ಹಾಗೂ ಯುವ ಪರಿವರ್ತಕರಾದ ಅಂಜಲಿ, ಮೇಘ, ಸುಷ್ಮಾ ಸೇರಿದಂತೆ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.